Election Commission

ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಪಟ್ಟು ಹೆಚ್ಚಿನ ಅರೆಸೇನಾ ಪಡೆ ನಿಯೋಜನೆ!
ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

EVM ಕಾರ್ಯನಿರ್ವಹಣೆ ಕುರಿತು EC ಯಿಂದ ಸ್ಪಷ್ಟೀಕರಣ ಕೇಳಿದ ಸುಪ್ರೀಂ ಕೋರ್ಟ್!
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಕೆಲವು ಅಂಶಗಳ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿರುವ ಸುಪ್ರೀಂ ಕೋರ್ಟ್, ಇಂದು ಮಧ್ಯಾಹ್ನ 2 ಗಂಟೆಗೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ನ್ಯಾಯಾಲಯದಲ್ಲಿ ಹಾಜರಿರುವಂತೆ ಸೂಚಿಸಿದೆ.

ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅಮಾನತಿಗೆ ಬಿಜೆಪಿ ಒತ್ತಾಯ, ಆಯೋಗಕ್ಕೆ ದೂರು
ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

42 ಕೋಟಿ ರೂ. ವ್ಯವಹಾರ: ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ
ಅಕ್ರಮ ವಹಿವಾಟು ನಡೆಸಲು ಸುಮಾರು 42 ಕೋಟಿ ರೂಪಾಯಿ ಸಂಗ್ರಹಿಸಿದ ಬಳ್ಳಾರಿ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Lok Sabha Poll 2024: ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ; ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್!
ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಮಾಂಗಲ್ಯ ಇರಲ್ಲ ಹೇಳಿಕೆ: ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ "ಸೂಕ್ತ ಕ್ರಮ" ತೆಗೆದುಕೊಳ್ಳುವಂತೆ ಕೋರಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಸೋಮವಾರ ದೂರು ನೀಡಿದೆ.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ವಿತರಿಸದಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಕಾಂಗ್ರೆಸ್ ಪಕ್ಷ ಮತದಾರರಿಗೆ ಆಮೀಷ ಒಡ್ಡುತ್ತಿದೆ , ಇದನ್ನು ನಿರ್ಬಂಧಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

