Election Commission

ನೀತಿ ಸಂಹಿತೆ ಉಲ್ಲಂಘಿಸಿದ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು: ಚುನಾವಣಾ ಆಯೋಗ
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಲೋಕ ಸಮರ 2024: ಟೆಲಿಫೋನ್ ಪ್ರಚಾರ/ಸಮೀಕ್ಷೆ ಹಾವಳಿ; ಬೇಸತ್ತ ಜನ; ಎಚ್ಚರ ಎಂದ ಚುನಾವಣಾ ಆಯೋಗ
ಲೋಕಸಭಾ ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಮಾತ್ರವೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಸಮೀಕ್ಷೆಗಳ ಫೋನ್ ಕರೆಗಳಿಗೆ ಜನರು ಬೇಸರ ಹೊರಹಾಕುತ್ತಿದ್ದಾರೆ.

Lok Sabha Election 2024: ಪ್ರಚಾರಕ್ಕೆ ನಕಲಿ 'Shah Rukh Khan' ಬಳಕೆ, ಬಿಜೆಪಿ ಆಕ್ರೋಶ, ಚುನಾವಣಾ ಆಯೋಗಕ್ಕೆ ದೂರು!
ಕಾಂಗ್ರೆಸ್ ಪಕ್ಷ ನಕಲಿ ಶಾರುಖ್ ಖಾನ್ ರನ್ನು ತಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ಮತದಾರರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಲೋಕಸಭೆ ಚುನಾವಣೆ: ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ, ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಕಾಂಗ್ರೆಸ್ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದುಹಾಕುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.

ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ಸುರ್ಜೇವಾಲಾ ಪ್ರಚಾರಕ್ಕೆ 48 ಗಂಟೆ ನಿಷೇಧ
ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿದೆ.

ದೇವೇಗೌಡರು ಭಾಗವಹಿಸಿದ್ದ ಸಭೆಯಲ್ಲಿ ಭದ್ರತಾ ಲೋಪ: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು, ಕ್ರಮಕ್ಕೆ ಆಗ್ರಹ
ತುಮಕೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ಲೋಪವಾಗಿದೆ ಎಂದು ಆರೋಪಿಸಿ ಜೆಡಿಎಸ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜಸ್ಥಾನ: ಲೋಕಸಭಾ ಚುನಾವಣೆಗೂ ಮುನ್ನ ದಾಖಲೆಯ 800 ಕೋಟಿ ರೂ. ನಗದು, ಮದ್ಯ ವಶ
ಲೋಕಸಭೆ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ರೂ. 800 ಕೋಟಿಗೂ ಹೆಚ್ಚು ನಗದು, ಮದ್ಯ, ಬೆಲೆಬಾಳುವ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಿವಿಧ ತನಿಖಾ ಸಂಸ್ಥೆಗಳು ವಶಪಡಿಸಿಕೊಂಡಿವೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಚಿವ ಡಿ ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನದ ಭರವಸೆಯ ಹೇಳಿಕೆ ನೀಡಿದ ಸಚಿವ ಡಿ ಸುಧಾಕರ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

'VFH' ಮತದಾರರ ಮೇಲೆ ಬಿಜೆಪಿ ಪ್ರಭಾವ ಆರೋಪ: ಗೌಪ್ಯತೆ ಉಲ್ಲಂಘನೆಯಾಗಿಲ್ಲ ಎಂದ ಚುನಾವಣಾ ಆಯೋಗ
ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನ ವ್ಯಕ್ತಿಗಳಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕೊಡಲಾಗಿದ್ದು, ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಪಕ್ಷದ ಏಜೆಂಟರು ತೆರಳಿದ್ದಾರೆಂಬ ಕಾಂಗ್ರೆಸ್ ಆರೋಪವನ್ನು ಚುನಾವಣಾ ಆಯೋಗ ನಿರಾಕರಿಸಿದೆ.

