Election

ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ನ.10ಕ್ಕೆ ಮುಂದೂಡಿಕೆ
ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯ ಮತ ಎಣಿಕೆಯನ್ನು ಭಾರತೀಯ ಚುನಾವಣಾ ಆಯೋಗ ನವೆಂಬರ್ 2ರಿಂದ 10ಕ್ಕೆ ಮುಂದೂಡಿದೆ. ಆಗ್ನೇಯ ಪದವೀಧರ, ಕರ್ನಾಟಕ ಪಶ್ಚಿಮ ಪದವೀಧರರು, ಕರ್ನಾಟಕ ಈಶಾನ್ಯ ಶಿಕ್ಷಕರ ಮತ್ತು ಬೆಂಗಳೂರು ಶಿಕ್ಷಕ ಕ್ಷೇತ್ರಗಳಿಗೆ ಮೊನ್ನೆ 28ರಂದು ಚುನಾವಣೆ ಏರ್ಪಟ್ಟಿತ್ತು.

ವಿಧಾನ ಪರಿಷತ್ತಿನ ಶಿಕ್ಷಕರು, ಪದವೀಧರರ 4 ಕ್ಷೇತ್ರಗಳ ಚುನಾವಣೆ: 52 ಅಭ್ಯರ್ಥಿಗಳಿಂದ 96 ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗ ಳಿಗೆ ಅ.೨೮ ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು,೫೭ ಅಭ್ಯ ರ್ಥಿಗಳು ೯೬ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಪಕ್ಷದಲ್ಲಿ ಚುನಾವಣೆ ನಡೆಯದಿದ್ದರೆ ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ:ಗುಲಾಂ ನಬಿ ಆಜಾದ್
ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಹಿರಿಯ ನಾಯಕರು ಒತ್ತಾಯಿಸಿ ಪತ್ರ ಬರೆದ ನಂತರ ಪಕ್ಷದಲ್ಲಿ ಹಲವು ಬೆಳವಣಿಗೆಗಳಾಗುತ್ತಿವೆ.

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ
ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆ ನಡೆಸಲಿದೆ.

ಮತದಾರರಿಗೆ ಗ್ಲೌಸ್ ಒದಗಿಸಬೇಕು, ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು- ಚುನಾವಣಾ ಆಯೋಗ
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಸಂದರ್ಭದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ವಿಸ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.

ಇನ್ನೂ ಆರಂಭವಾಗಿಲ್ಲ ಚುನಾವಣಾ ಪ್ರಕ್ರಿಯೆ: ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಸಾಧ್ಯತೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಆಡಳಿತಾಧಿಕಾರಿ ನೇಮಕ ಮಾಡುವ ಸಾಧ್ಯತೆಯಿದೆ. ಸೆಪ್ಟಂಬರ್ ತಿಂಗಳಲ್ಲಿ ಬಿಬಿಎಂಪಿ ಸದಸ್ಯರ ಅವಧಿ ಅಂತ್ಯಗೊಳ್ಳಲಿದ್ದು, ಆದರೆ ಕೊರೋನಾ ಕಾರಣದಿಂದಾಗಿ ಇನ್ನೂ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿಲ್ಲ.

ಅಕ್ಟೋಬರ್‌ನಲ್ಲಿ ಗ್ರಾ.ಪಂ.ಚುನಾವಣೆ ಸಾಧ್ಯತೆ: ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ
ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಮೇಲ್ಮನೆ ಚುನಾವಣೆ: ಎಂಎಲ್ ಸಿ ಅಭ್ಯರ್ಥಿ ಆಯ್ಕೆ ಕುರಿತು ಇಂದು ಬಿಜೆಪಿ ಸಭೆ
ವಿಧಾನಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಮಾಧುಸ್ವಾಮಿ
ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

