Elgar Parishad case

ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು!
ರಾವತ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೋರಿಕೆ ಮೇರೆಗೆ ತನ್ನ ಆದೇಶವನ್ನು ಒಂದು ವಾರ ತಡೆಹಿಡಿಯಿತು.

ಎಲ್ಗಾರ್ ಪರಿಷತ್ ಪ್ರಕರಣ: ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ಧ ಪೀಠವು ಪ್ರಕರಣದಲ್ಲಿ ನವ್ಲಾಖಾಗೆ ನೀಡಲಾದ ಜಾಮೀನಿಗೆ ಬಾಂಬೆ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆಯನ್ನು ವಿಸ್ತರಿಸಲು ನಿರಾಕರಿಸಿತು.

ಎಲ್ಗಾರ್ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ಎಲ್ಗಾರ್ ಪರಿಷತ್– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾ ಜೈಲಿನಿಂದ ಬಿಡುಗಡೆ
ಎಲ್ಗಾರ್ ಪರಿಷದ್- ಮಾವೋವಾದಿಗಳ ಸಂಪರ್ಕ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ವೆರ್ನಾನ್ ಗೊನ್ಸಾಲ್ವಿಸ್ ಹಾಗೂ ಅರುಣ್ ಫೆರೇರಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣ: ಆನಂದ್ ತೆಲ್ತುಂಬ್ಡೆ ಜೈಲಿನಿಂದ ಬಿಡುಗಡೆ
ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬ್ಡೆ ಅವರು ಶನಿವಾರ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಭೀಮಾ ಕೋರೆಗಾಂವ್ ಕೇಸ್: ಆನಂದ್ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಎಲ್ಗಾರ್ ಪರಿಷತ್ ಪ್ರಕರಣ: 24 ಗಂಟೆಯೊಳಗೆ ಗೌತಮ್ ನವ್ಲಾಖಾರನ್ನು ಗೃಹಬಂಧನದಲ್ಲಿರಿಸಿ: 'ಸುಪ್ರೀಂ' ಆದೇಶ
ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತಲೋಜಾ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು 24 ಗಂಟೆಗಳ ಒಳಗೆ ಗೃಹಬಂಧನ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್
ಎಲ್ಗಾರ್ ಪರಿಷತ್-ಮಾವೋವಾದಿಗಳ ಸಂಪರ್ಕವಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಶೋಮಾ ಸೇನ್ ಹಾಗೂ ಇನ್ನೂ ನಾಲ್ವರ ಜಾಮೀನು ಅರ್ಜಿಯನ್ನು ಮುಂಬೈ ನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ.

ಎಲ್ಗರ್ ಪರಿಷದ್ ಪ್ರಕರಣ ಆರೋಪಿಗಳು ದೇಶದ ವಿರುದ್ಧ ಯುದ್ಧ ಸಾರಲು ಬಯಸಿದ್ದರು: ಎನ್ ಐಎಯಿಂದ ಕರಡು ಆರೋಪ ಸಲ್ಲಿಕೆ
ಎಲ್ಗರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮುಂದೆ ಕರಡು ಆರೋಪಪಟ್ಟಿ ಸಲ್ಲಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ), ಆರೋಪಿಗಳು ತಮ್ಮದೇ ಸ್ವಂತ ಸರ್ಕಾರ ರಚಿಸಿ ದೇಶದ ವಿರುದ್ಧ ಯುದ್ಧ ಸಾರಲು ನೋಡಿದ್ದರು ಎಂದು ಪ್ರತಿಪಾದಿಸಿದೆ.

