ರಾಜ್ಯನರೇಗಾ ಯೋಜನೆಯಡಿ ಉದ್ಯೋಗದ ದಿನ ಹೆಚ್ಚಳ, ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಎಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದಾರೆ.