encounter

ಮಣಿಪುರ: ಪೊಲೀಸ್ ಔಟ್ ಫೋಸ್ಟ್ ಗಳಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಲೂಟಿ, ಓರ್ವ ಪೋಲೀಸ್ ಹತ್ಯೆ
ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಎರಡು ಪೊಲೀಸ್ ಭದ್ರತಾ ಪೋಸ್ಟ್‌ಗಳನ್ನು ಧ್ವಂಸಗೊಳಿಸಿರುವ ಉದ್ರಿಕ್ತ ಗುಂಪುಗಳು, ಬೃಹತ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌತ್ರುಕ್‌ನಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರು ಹತ
ಜಮ್ಮು ಮತ್ತು ಕಾಶ್ಮೀರದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾರತೀಯ ಸೇನಾಪಡೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೊಂಚ್ ನಲ್ಲಿ ಉಗ್ರರ ಜೊತೆಗಿನ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧನಿಗೆ ಗಾಯ
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸುತ್ತಿದ್ದ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಯೋಧರೊಬ್ಬರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ
ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್: ಇಬ್ಬರು ಸೈನಿಕರ ಸಾವು, ಉಗ್ರರಿಬ್ಬರ ಹತ್ಯೆ!
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಉತ್ತರ ವಜೀರಿಸ್ತಾನದ ಬುಡಕಟ್ಟು ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಭಯೋತ್ಪಾದಕರೊಂದಿಗೆ ಎನ್‌ಕೌಂಟರ್ ನಡೆಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಸೇನೆಯ ಇಬ್ಬರು ಯೋಧರು ಸಾವನ್ನಪ್ಪಿದ್ದರೆ ಇದೇ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ.

ಮಣಿಪುರದಲ್ಲಿ ಕುಕಿ ಉಗ್ರರ ಅಟ್ಟಹಾಸಕ್ಕೆ ಸೇನೆ ತಿರುಗೇಟು; 40 ಉಗ್ರರ ಎನ್ಕೌಂಟರ್: ಸಿಎಂ ಬಿರೇನ್ ಸಿಂಗ್ ಮಾಹಿತಿ
ಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ 40 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್; ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದ್ದು, ಸೇನಾ ಕಾರ್ಯಾಚರಣೆ ನಡೆಯುತ್ತಿದೆ.

ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ ಸ್ಟರ್ ಎನ್ ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಎಸ್ ಟಿಎಫ್
ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ.

