encounter

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆ ಸಮಿತಿ ರಚಿಸಿದ ಯುಪಿ ಸರ್ಕಾರ
ಗ್ಯಾಂಗ್ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಪುತ್ರ ಅಸಾದ್ ನ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ನ್ಯಾಯಾಂಗ ತನಿಖೆ ಸಮಿತಿ ರಚನೆ ಮಾಡಿದೆ.

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್'ಕೌಂಟರ್ ನಲ್ಲಿ ಹತ್ಯೆ
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ ಪುತ್ರ ಅಸದ್ ಹಾಗೂ ಆತನ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಜಾರ್ಖಾಂಡ್'ನಲ್ಲಿ ಎನ್ಕೌಂಟರ್: ಐವರು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಐವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಸುರೇಶ್ ರೈನಾ ಸಂಬಂಧಿಕರನ್ನು ಕೊಂದಿದ್ದ ಕುಖ್ಯಾತ ರೌಡಿ ರಶೀದ್ ಎನ್‌ಕೌಂಟರ್‌ನಲ್ಲಿ ಹತ್ಯೆ
2020ರಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಇಂದು ಸಂಜೆ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಯುಪಿ ಪೊಲೀಸರು ಹೊಡೆದುರುಳಿಸಿದ್ದಾರೆ.

ಛತ್ತೀಸ್‌ಗಢ: ನಕ್ಸಲರೊಂದಿಗೆ ಗುಂಡಿನ ಕಾಳಗ, ಇಬ್ಬರು ಕೋಬ್ರಾ ಕಮಾಂಡೋಗಳಿಗೆ ಗಾಯ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‌ಪಿಎಫ್‌ನ ಎಲೈಟ್ ಜಂಗಲ್ ವಾರ್‌ಫೇರ್ ಯುನಿಟ್ ಕೋಬ್ರಾದ ಇಬ್ಬರು ಕಮಾಂಡೋಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ...

ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್: ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಪೊಲೀಸರ ಗುಂಡಿಗೆ ಹತ
ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕೇವಲ 8 ದಿನಗಳ ಅಂತರದಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ.

ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದ್ದ ಉಗ್ರನ ಎನ್‌ಕೌಂಟರ್
ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

