ರಾಜ್ಯಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ; ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿ
ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.