ರಾಜ್ಯಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ
ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.