Enforcement Directorate

ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ 'ಹಗರಣ': ಪಿಎಂಎಲ್ಎ ಅಡಿಯಲ್ಲಿ 76.54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇ.ಡಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ದೆಹಲಿ ಮತ್ತು ಮುಂಬೈನ ದುಬಾರಿ ಪ್ರದೇಶಗಳಲ್ಲಿ ನೆಲೆಗೊಂಡಿರುವ ಮನೆಗಳು, ರೆಸ್ಟೋರೆಂಟ್‌ಗಳು, 50 ವಾಹನಗಳು ಮತ್ತು ₹ 76.54 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.

ದೆಹಲಿ ಲಿಕ್ಕರ್ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾ ಹಾಗೂ ಇತರರಿಂದ ಆಪ್ ಸರ್ಕಾರಕ್ಕೆ 100 ಕೋಟಿ ರೂ. ಕಿಕ್ ಬ್ಯಾಕ್; ಇಡಿ ವರದಿ ಸಲ್ಲಿಕೆ
ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ವಿಜಯ್ ನಾಯರ್ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪವನ್ನು ಜಾರಿ ನಿರ್ದೇಶನಾಲಯ ಮಾಡಿದೆ. ಅದು ಎಷ್ಟೆಂದರೆ ಕನಿಷ್ಟ 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು.

ಎನ್ಐಎ ಸೇರಿದಂತೆ 15 ಸಂಸ್ಥೆಗಳೊಂದಿಗೆ ಅಪರಾಧಿಗಳ ಮಾಹಿತಿ ಹಂಚಿಕೊಳ್ಳುವುದಕ್ಕೆ ಇಡಿಗೆ ಸರ್ಕಾರ ಅನುಮತಿ
ಜಾರಿ ನಿರ್ದೇಶನಾಲಯವು ಈಗ ಆರ್ಥಿಕ ಅಪರಾಧಿಗಳ ಮಾಹಿತಿಯನ್ನು ಇತರ ಸರ್ಕಾರಿ ಏಜೆನ್ಸಿಗಳೊಂದಿಗೆ ಹಂಚಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಲೈಗರ್ ಸಿನಿಮಾಗೆ ಹಣದ ಹರಿವು: ನಿರ್ದೇಶಕ ಪುರಿ ಜಗನ್ನಾಥ್, ಚಾರ್ಮಿ ಕೌರ್‌ರನ್ನು ವಿಚಾರಣೆ ನಡೆಸಿದ ಇ.ಡಿ
ಟಾಲಿವುಡ್ ನಟ ವಿಜಯ ದೇವರಕೊಂಡ ಅಭಿನಯದ ಲೈಗರ್ ಸಿನಿಮಾಗೆ ಭಾರಿ ಬಂಡವಾಳ ಹೂಡಿಕೆಯ ವಿರುದ್ಧ ಶಂಕಿತ ವಿನಿಮಯ ನಿರ್ವಹಣಾ ಕಾಯ್ದೆಯ (ಎಫ್ಇಎಂಎ) ಉಲ್ಲಂಘನೆ ವಿಚಾರವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ದಿನವಿಡೀ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ನಟಿ, ನಿರ್ಮಾಪಕಿ ಚಾರ್ಮಿ ಕೌರ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ತನಿಖೆ ಹೆಸರಲ್ಲಿ ಇಡಿಯಿಂದ ಪದೇ ಪದೇ ಹಿಂಸೆ: ಡಿಕೆ ಶಿವಕುಮಾರ್
ತನಿಖೆ ಹೆಸರಲ್ಲಿ ಜಾರಿನಿರ್ದೇಶನಾಲಯ ಪದೇ ಪದೇ ಹಿಂಸೆ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಜಾರಿ ನಿರ್ದೇಶನಾಲಯ 'ಸಂಪೂರ್ಣವಾಗಿ ಸ್ವತಂತ್ರವಾಗಿದೆ'; ಸೇಡಿನ ಉದ್ದೇಶಕ್ಕೆ ಬಳಸಿಲ್ಲ: ನಿರ್ಮಲಾ ಸೀತಾರಾಮನ್
ಜಾರಿ ನಿರ್ದೇಶನಾಲಯವು 'ಸಂಪೂರ್ಣವಾಗಿ ಸ್ವತಂತ್ರವಾಗಿದೆ' ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು, ರಾಜಕೀಯ ಅಥವಾ ಸೇಡಿನ ಉದ್ದೇಶಗಳಿಗಾಗಿ ಸರ್ಕಾರವು ತನಿಖಾ ಸಂಸ್ಥೆಯನ್ನು ಬಳಸುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ್ದಾರೆ.

