Enforcement Directorate

ಜಾರ್ಖಂಡ್: ಸಿಎಂ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜಿನಾಮೆ, ಇಡಿ ವಶಕ್ಕೆ; ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಆಯ್ಕೆ!
ಭೂ ಅಕ್ರಮ ಪ್ರಕರಣ, ಅಕ್ರಮ ಗಣಿಗಾರಿಕೆ ಸೇರಿದಂತೆ ಕೆಲ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಸುಕೇಶ್ ಚಂದ್ರಶೇಖರ್ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೊತ್ತಿದ್ದೂ ಭಾಗಿಯಾಗಿದ್ದಾರೆ; ಕೋರ್ಟ್ ಗೆ ಇಡಿ ಹೇಳಿಕೆ
200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್, ವಂಚಕ ಸುಕೇಶ್ ಚಂದ್ರಶೇಖರ್ ಅವರ ಅಪರಾಧದ ಆದಾಯವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮತ್ತು ಬಳಸಿಕೊಳ್ಳುವಲ್ಲಿ ಉದ್ದೇಶಪೂರ್ವಕವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.

ಸಿಎಂ ಹೇಮಂತ್ ಸೊರೇನ್ ಗೆ ED ಬಂಧನದ ಭೀತಿ: ಕಲ್ಪನಾ ಸೊರೇನ್ ಜಾರ್ಖಂಡ್ ನ ನೂತನ ಸಿಎಂ?
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗುವ ಭೀತಿ ಎದುರಿಸುತ್ತಿರುವ ಜಾರ್ಖಂಡ್ ಸೊರೇನ್ ಅವರು ಯಾರ ಸಂಪರ್ಕಕ್ಕೂ ಸಿಗದೇ ತಲೆಮರೆಸಿಕೊಂಡಿದ್ದಾರೆ.

ED ಗೆ ಸಿಗದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ನಿವಾಸದಿಂದ ಬಿಎಂಡಬ್ಲ್ಯು ಕಾರು ವಶಕ್ಕೆ!
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ದಾಖಲೆಗಳು ಹಾಗೂ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ.

ವರ್ಗಾವಣೆ ದಂಧೆ ಆರೋಪ: ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.

ಮದ್ಯ ನೀತಿ ಪ್ರಕರಣ: ಬಿಆರ್ ಎಸ್ ನಾಯಕಿ ಕೆ ಕವಿತಾಗೆ ಇಡಿ ಸಮನ್ಸ್
ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯ ಬಿಆರ್ ಎಸ್ ನಾಯಕಿ ಕೆ ಕವಿತಾಗೆ ಸಮನ್ಸ್ ಜಾರಿಗೊಳಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನ ಸಾಧ್ಯತೆ, ದೆಹಲಿ ಸಿಎಂ ನಿವಾಸದ ರಸ್ತೆ ಪ್ರವೇಶಿಸದಂತೆ ತಡೆ: AAP ಆರೋಪ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED (enforcement directorate) ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ವಿವೋ-ಇಂಡಿಯಾದ ಮೂವರಿಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ; ಆದೇಶ ಪ್ರಶ್ನಿಸಲು ಮುಂದಾದ ಇ.ಡಿ
ಈ ತಿಂಗಳ ಆರಂಭದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮೂವರು ವಿವೋ-ಇಂಡಿಯಾದ ಕಾರ್ಯನಿರ್ವಾಹಕರಿಗೆ ದೆಹಲಿ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.

752 ಕೋಟಿ ರೂ ಮೌಲ್ಯದ ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ ಮಾಡಿದ ಇಡಿ
ಮಹತ್ವದ ಬೆಳವಣಿಗೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಸುಮಾರು 752 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿದೆ.

