enquiry

'ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ': ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ: ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ ಎ ಪಾಟೀಲ್ ಅವರ ನೇತೃತ್ವದ ತನಿಖಾ ಆಯೋಗವನ್ನು ನೇಮಿಸಿದೆ.

ಪ್ರಿಯಾಂಕಾ ಗಾಂಧಿ ಕುರ್ತಾ ಹಿಡಿದು ಎಳೆದ ಪೊಲೀಸ್: ಘಟನೆ ಬಗ್ಗೆ ಕ್ಷಮೆ ಕೇಳಿದ ನೊಯ್ಡಾ ಪೊಲೀಸರು
ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ಹೋಗುತ್ತಿದ್ದ ವೇಳೆ ತಡೆದ ಪೊಲೀಸರು ಕುರ್ತಾ ಹಿಡಿದು ಎಳೆದ ಘಟನೆ ಬಗ್ಗೆ ಕ್ಷಮೆ ಕೇಳಿರುವ ಗೌತಮ್ ಬುದ್ಧ ನಗರ ಪೊಲೀಸರು ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಬೆಂಗಳೂರು ಗಲಭೆ ಪ್ರಕರಣ: ಕೊರೋನಾ ಸೋಂಕು ಕಾರಣ ನೀಡಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಗೈರು
ಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ.

ಮೈಮುಲ್ ಅಕ್ರಮ ನೇಮಕಾತಿ ಬಗ್ಗೆ ಇಲಾಖಾ ತನಿಖೆ: ಎಸ್.ಟಿ. ಸೋಮಶೇಖರ್
ಮೈಮುಲ್ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿ ಇಲಾಖೆ ತನಿಖೆಗೆ ಆದೇಶ ನೀಡಲಾಗಿದೆ. ತನಿಖಾ ವರದಿ ಬಂದ ಮೇಲೆ ಲೋಪದೋಷಗಳಿದ್ದರೆ ಸರಿಪಡಿಸಲಾಗುವುದು. ಯಾರೋ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿ ಇಡೀ ನೇಮಕಾತಿ ಪ್ರಕ್ರಿಯೆ ಕೈಬಿಡಲು ಸಾಧ್ಯವಿಲ್ಲ

ಜೆಎನ್ ಯು ಹಿಂಸಾಚಾರ: 9 ವಿದ್ಯಾರ್ಥಿಗಳಿಗೆ ನೊಟೀಸ್ ಜಾರಿ ಮಾಡಿದ ದೆಹಲಿ ಪೊಲೀಸ್ ಎಸ್ಐಟಿ, ನಾಳೆ ವಿಚಾರಣೆ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ 5ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡ 9 ವಿದ್ಯಾರ್ಥಿಗಳಿಗೆ ನೊಟೀಸ್ ಜಾರಿ ಮಾಡಿದೆ. ಶಂಕಿತರನ್ನು ನಾಳೆ ವಿಚಾರಣೆಗೆ ದೆಹಲಿ ಪೊಲೀಸರು ಕರೆದಿದ್ದಾರೆ.

ಹನಿ ಟ್ರ್ಯಾಪ್ ದಂಧೆ: ಅತಿ ಪ್ರಭಾವಶಾಲಿ ವ್ಯಕ್ತಿಯಾಗಬೇಕೆಂಬ ಕನಸು ಕಟ್ಟಿದ್ದ ಶ್ವೇತಾ ಜೈನ್
ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಕಿಂಗ್ ಪಿನ್ ಶ್ವೇತಾ ಜೈನ್ ಗೆ ರಾಜ್ಯದಲ್ಲೇ ಅತಿ ಪ್ರಭಾವಶಾಲಿಯಾಗಬೇಕು ಎಂಬ..

ನಾಳೆ ಮತ್ತೆ ಇಡಿ ವಿಚಾರಣೆ:ಇದು ರಾಜಕೀಯ ಪ್ರೇರಿತ ಪ್ರಕರಣ- ಡಿಕೆ ಶಿವಕುಮಾರ್
ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಂದು ಕೂಡಾ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಸೋಮವಾರವೂ ಮುಂದುವರೆಯಲಿದೆ ಡಿಕೆಶಿ ಇಡಿ ವಿಚಾರಣೆ
ನೋಟು ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಎರಡನೇ ದಿನದ ಇಡಿ ವಿಚಾರಣೆ ಅಂತ್ಯಗೊಂಡಿದೆ. ಸುಮಾರು 28 ಗಂಟೆಗೂ ಹೆಚ್ಚು ಕಾಲ ಶಿವಕುಮಾರ್ ವಿಚಾರಣೆ ನಡೆದಿದ್ದು, ಸೋಮವಾರವೂ ಮುಂದುವರೆಯಲಿದೆ.

