escape

ಬೆಂಗಳೂರು: 'ಡಿ ಬಾಸ್' ಎಂದು ಕೂಗಿದ್ದಕ್ಕೆ ಮಾರಾಮಾರಿ; ಸ್ನೇಹಿತನ ಕತ್ತು ಸೀಳಿದ ದರ್ಶನ್ ಅಭಿಮಾನಿಗಳು!
ಗುರುವಾರ ರಾತ್ರಿ ವೆಂಕಟೇಶ್ ಸ್ವಾಮಿ ಮಲಗಿದ್ದ, ಮಹದೇವ್ ಮತ್ತು ಕಿರಣ್ ಮದ್ಯ ಸೇವಿಸಿದ್ದರು. ಈ ವೇಳೆ ಇಬ್ಬರು ನಟ ದರ್ಶನ್ ಅವರನ್ನು ಉಲ್ಲೇಖಿಸಿ "ಡಿ ಬಾಸ್" ಎಂದು ಕೂಗಲು ಪ್ರಾರಂಭಿಸಿದರು.

ಬೆಂಗಳೂರು ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ: ಮತ್ತೆ ಸೆರೆಮನೆ ವಾಸ ಫಿಕ್ಸ್!
2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಬಿಟ್ ಕಾಯಿನ್ ಹಗರಣ: ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರು ಹತ್ತಿಸಲು ಯತ್ನ, ಡಿವೈಎಸ್'ಪಿ ಶ್ರೀಧರ್ ಪರಾರಿ!
ಬಿಟ್ ಕಾಯಿನ್ ಹಗರಣದ ಆರೋಪಿ ಆಂತರಿಕ ಭದ್ರತಾ ವಿಭಾಗದ ಡಿವೈಎಸ್'ಪಿ ಶ್ರೀಧರ್.ಕೆ. ಪೂಜಾರಿ ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.

ರುದ್ರಗೌಡ ಪಾಟೀಲ್ ಮಹಾರಾಷ್ಟ್ರದಲ್ಲಿ ಇರುವ ಬಗ್ಗೆ ಮಾಹಿತಿ ಇದೆ, ಅಗತ್ಯಬಿದ್ದರೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ ಪರಮೇಶ್ವರ್
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಪರಾರಿಯಾಗಿರುವ ಘಟನೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ.

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!
ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಕೈದಿಗಳು ಕೇಂದ್ರ ಕಾರಾಗೃಹದಿಂದ ಪರಾರಿ
ಸಿಲ್ಚಾರ್ ಕೇಂದ್ರ ಕಾರಾಗೃಹದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳು ಪರಾರಿಯಾಗಿದ್ದಾರೆ. ಈ ಸುದ್ದಿ ಇದೀಗ ಪೊಲೀಸ್ ಇಲಾಖೆ ಸೇರಿದಂತೆ ಇಡೀ ನಗರದಲ್ಲಿ ಸಂಚಲನ ಉಂಟಾಗಿದೆ.

ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು
ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಜ್ಯೋತಿಷಿ ಪರಾರಿ
ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.

ಚಿಕಿತ್ಸೆಗಾಗಿ ಕರೆತಂದ ವೇಳೆ ಉತ್ತರ ಪ್ರದೇಶದ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ!
ಚಿಕಿತ್ಸೆಗಾಗಿ ಕರೆತರಲಾಗಿದ್ದ ವೇಳೆ ಜಿಲ್ಲಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

