Eshwar Khandre

ಮೈಸೂರು ದಸರಾ 2023ಕ್ಕೆ ಮುನ್ನುಡಿ: ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ(Mysuru Dasara 2023) ಆರಂಭಕ್ಕೆ ಇನ್ನು ಒಂದೂವರೆ ತಿಂಗಳು ಬಾಕಿ ಇದೆಯಷ್ಟೆ. ದಸರಾದ ಮುಖ್ಯವಾದ ಗಜಪಯಣಕ್ಕೆ ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ಹೆಬ್ಬಾಗಿಲಿನಲ್ಲಿ ಚಾಲನೆ ನೀಡಲಾಗಿದೆ.

ಬಡವರು, ಮಧ್ಯಮ ವರ್ಗದವರಿಗೆ ಗೃಹ ಜ್ಯೋತಿ ಯೋಜನೆ ಸಹಕಾರಿ: ಸಚಿವ ಈಶ್ವರ್ ಖಂಡ್ರೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.

ಬುಡಕಟ್ಟು ಜನರ ಸ್ಥಳಾಂತರಕ್ಕೆ ಹೊಸ ನೀತಿ ರೂಪಿಸಲು ಸರ್ಕಾರ ಮುಂದು!
ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳ ಪರಿಹರಿಸಲು, ಅರಣ್ಯ ಪ್ರದೇಶಗಳ ರಕ್ಷಣೆ ಮಾಡಲು ಮತ್ತು ಆದಿವಾಸಿಗಳ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಮನಸಲ್ಲಿದ್ದಿದ್ದು ಖಂಡ್ರೆ, ಬಾಯಿಗೆ ಬಂದಿದ್ದು ಖರ್ಗೆ ಹೆಸರು: ಆರಗ ಜ್ಞಾನೇಂದ್ರ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಸಚಿವ ಈಶ್ವರ ಖಂಡ್ರೆ
ಪಶ್ಚಿಮ ಘಟ್ಟಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದೆ. ಆದರೆ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಬದ್ಧ ಎಂದು ಹೇಳಿಲ್ಲ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮಘಟ್ಟ ಸಂರಕ್ಷಣೆಯಲ್ಲಿ ಅಂತರ್ ರಾಜ್ಯಗಳ ಸಮನ್ವಯ ಅಗತ್ಯ: ಸಚಿವ ಈಶ್ವರ್ ಖಂಡ್ರೆ
ಪಶ್ಚಿಮ ಘಟ್ಟಗಳು ಇತರ ಹಲವು ರಾಜ್ಯಗಳಿಗೆ ವಿಸ್ತರಿಸಿದ್ದು, ಪಶ್ಚಿಮಘಟ್ಟಗಳ ಸಂರಕ್ಷಣೆಯಲ್ಲಿ ಅಂತರರಾಜ್ಯ ಸಮನ್ವಯ ಮತ್ತು ಸಂಘಟಿತ ಪ್ರಯತ್ನಗಳ ಅಗತ್ಯವಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಶನಿವಾರ ಹೇಳಿದರು.

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ: ಸಚಿವ ಈಶ್ವರ್ ಖಂಡ್ರೆ
ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರೆ.

ಅರಣ್ಯ ಭೂಮಿ ಒತ್ತುವರಿಯಾದರೆ ಕಠಿಣ ಕ್ರಮ, ತಪ್ಪಿತಸ್ಥ ಅಧಿಕಾರಿಗಳನ್ನು ಬಿಡಲ್ಲ: ಈಶ್ವರ್ ಖಂಡ್ರೆ
ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅತಿಕ್ರಮಣ ಪ್ರಕರಣಗಳು ಕಂಡು ಬಂದರೆ ಅಧಿಕಾರಿಗಳನ್ನೂ ಬಿಡುವುದಿಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೋಮವಾರ ಖಡಕ್ ಎಚ್ಚರಿಕೆ ನೀಡಿದರು.

ಒತ್ತುವರಿ ವಿರುದ್ಧ ಕ್ರಮ: ಅರಣ್ಯ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ- ಸಚಿವ ಈಶ್ವರ್ ಖಂಡ್ರೆ
ರಾಜ್ಯದ ಹಲವೆಡೆ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅವುಗಳನ್ನೆಲ್ಲ ತೆರವು ಮಾಡಲಾಗುವುದು. ಇದಕ್ಕಾಗಿ ಅರಣ್ಯ ಮತ್ತು ಕಂದಾಯ ಇಲಾಖೆಯು ಜಂಟಿ ಸಮೀಕ್ಷೆ ಮಾಡಿ, ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಹೇಳಿದರು.

