ರಾಜ್ಯಅಸೆಂಬ್ಲಿ ಚುನಾವಣೆ: ಆದಿವಾಸಿ ಬುಡಕಟ್ಟು ಸಮುದಾಯದವರಿಗೆ 40 ಜನಾಂಗೀಯ ಮತಗಟ್ಟೆಗಳ ಸ್ಥಾಪನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಸಮುದಾಯದವರಿಗಾಗಿ 40 ಜನಾಂಗೀಯ (ಎಥ್ನಿಕ್ ) ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ರಾಜ್ಯದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.