ರಾಜಕೀಯಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿಯ ಇಬ್ಬರು ಮಾಜಿ ಶಾಸಕರು, ಕಾಂಗ್ರೆಸ್ ಸೇರುವ ಇಂಗಿತ!
ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.