Ex CM Basavaraja Bommai

ಆಸ್ತಿ ಮೌಲ್ಯ 54 ಕೋಟಿ ರೂ., ಯಾವುದೇ ವಾಹನ ಹೊಂದಿಲ್ಲ!: ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಅವರು ಘೋಷಿಸಿಕೊಂಡಂತೆ ಅವರ ಬಳಿ 23.45 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯಿದೆ.

ಮಾಜಿ ಸಿಎಂ ಬೊಮ್ಮಾಯಿ ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ, ಇನ್ನು 4 ವಾರಗಳಲ್ಲಿ ಹೊರಗೆ ಓಡಾಡಬಹುದು: ವೈದ್ಯರು
ಕಳೆದ ಸೋಮವಾರ ಮೊಣಕಾಲಿನ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸ ಮತ್ತು ಧೈರ್ಯದ ಮನೋಭಾವದಿಂದ ಅಚ್ಚರಿಯ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಗ್ರೂಪ್ ಆಸ್ಪತ್ರೆಗಳ ಕಾರ್ಡಿಯೋಥೊರಾಸಿಕ್ ಸೈನ್ಸ್ ಮುಖ್ಯಸ್ಥ ಡಾ ವಿವೇಕ್ ಜವಳಿ ಹೇಳುತ್ತಾರೆ.

ಮಾಜಿ ಸಿಎಂ ಬೊಮ್ಮಾಯಿಗೆ ಮಂಡಿನೋವಿನ ಶಸ್ತ್ರಚಿಕಿತ್ಸೆ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಬಹಳ ದಿನಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದೆ.

ಮೊಣಕಾಲಿನ ಬೈಪಾಸ್ ಸರ್ಜರಿಗೆ ಒಳಗಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ: ಐಸಿಯುಗೆ ವರ್ಗಾವಣೆ, ಆರೋಗ್ಯ ಸ್ಥಿರ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅವರಿಗೆ ಸಿಎಬಿಜಿ-ಕರೋನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡಲಾಗಿದೆ.

ಆಡಳಿತ-ವಿಪಕ್ಷಗಳ ಗದ್ದಲ: ಬೆಳಗ್ಗೆ ಸಿಎಂ, ಸ್ಪೀಕರ್ ಭೇಟಿ ಮಾಡಿದ ಬೊಮ್ಮಾಯಿ-ಸುನಿಲ್ ಕುಮಾರ್, ಪರಿಷತ್ ಕಲಾಪ ಮುಂದೂಡಿಕೆ
ಇತ್ತ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರು ಕದನ ಮುಂದುವರಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರೂ, ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೂ ಅತ್ತ ಆಡಳಿತ, ವಿಪಕ್ಷ ನಾಯಕರು ಒಟ್ಟು ಸೇರಿ ಖುಷಿಯಿಂದ ಸಮಯ ಕಳೆದಿದ್ದಾರೆ.

'ಧಮ್ಮಿದ್ರೆ, ತಾಕತ್ತಿದ್ರೆ ಎಲ್ಲಾ ಕಡೆಯಿಂದ ಸಂಗ್ರಹಣೆ ಮಾಡಿ 15 ಕೆಜಿ ಅಕ್ಕಿ ಕೊಡಿ': ಬಿಜೆಪಿ ಪ್ರತಿಭಟನೆ, ಪೊಲೀಸರ ವಶ
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಒಂದು ಕಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಭಾರೀ ಮಳೆಯ ನಡುವೆ ಪ್ರತಿಭಟನೆ ನಡೆಯಿತು.

