ದೇಶಬೇಷರತ್ ಕ್ಷಮೆಯಾಚನೆ: ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯಗೊಳಿಸಿದ 'ಸುಪ್ರೀಂ'
ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಲಲಿತ್ ಮೋದಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಬೇಷರತ್ ಕ್ಷಮೆ ಯಾಚಿಸಿದ ನಂತರ ಸುಪ್ರೀಂ ಕೋರ್ಟ್ ಈ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.