exam

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ
ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ನೀಟ್ -ಜೆಇಇ ಪರೀಕ್ಷೆ ಬಿಗಿಪಟ್ಟು: ವಿದ್ಯಾರ್ಥಿಗಳು- ದ್ರೌಪದಿ, ಸಿಎಂಗಳು- ಕೃಷ್ಣ, ನಾನು ವಿದುರ-ಸುಬ್ರಮಣಿಯನ್ ಸ್ವಾಮಿ
ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ
ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಮಧ್ಯೆ ನೀಟ್, ಜೆಇಇ ಪರೀಕ್ಷೆಗೆ ವಿರೋಧ: ದೇಶಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ
ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.

ಸೆಪ್ಟೆಂಬರ್ 7 ರಿಂದ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ
ಈಗಾಗಲೇ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ.

ಎಸ್ಎಸ್ಎಲ್'ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿ: ಶೇ.98ರಷ್ಟು ವಿದ್ಯಾರ್ಥಿಗಳು ಹಾಜರ್, ನಾಲ್ವರು ಡಿಬಾರ್
ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್'ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಸೋಂಕಿತ ವಿದ್ಯಾರ್ಥಿಯೊಂದಿಗೆ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್
ಕೊರೋನಾ ಸೋಂಕಿತ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳ ವರದಿ ಬಂದಿದ್ದು, ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ, ಹೀಗಾಗಿ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಎಸ್ಎಸ್ಎಲ್'ಸಿ ಗಣಿತ ಪರೀಕ್ಷೆಗೆ ಗೈರು ಹಾಜರಾದ 10,000 ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು
ಎಸ್ಎಸ್ಎಲ್'ಸಿ ಪರೀಕ್ಷೆಯ ಮೂರನೇ ವಿಷಯವಾದ ಗಣಿತ ಪರೀಕ್ಷೆ ಶನಿವಾರ ನಡೆದಿದ್ದು, ಪರೀಕ್ಷೆಗೆ ಕಲ್ಯಾಣ ಕರ್ನಾಟಕ ಭಾಗದ ಸುಮಾರು 10,000 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ, ಶಾಸಕರಿಗೆ ಪರೀಕ್ಷಾ ಕೇಂದ್ರದಲ್ಲಿ ಫೋಟೋ ಕ್ಲಿಕ್ಕಿಸುವ ಚಿಂತೆ!
ಎಸ್ಎಸ್ಎಲ್'ಸಿ ಪರೀಕ್ಷೆಯ ಮೂರನೇ ವಿಷಯವಾದ ಗಣಿತ ಪರೀಕ್ಷೆ ಶನಿವಾರ ನಡೆದಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಒತ್ತಡದಲ್ಲಿದ್ದರೆ, ಮತ್ತೊಂದೆಡೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದ ಶಾಸಕರು ಫೋಟೋ ಕ್ಲಿಕ್ಕಿಸಿಕೊಳ್ಳುವುದರಲ್ಲಿ ಕಾರ್ಯಮಗ್ನರಾಗಿರುವುದು ಕಂಡು ಬಂದಿತ್ತು.

