ರಾಜಕೀಯ‘ಹಲ್ಕಾ’ಮಾತಿನಿಂದ ಕಾಂಗ್ರೆಸ್ -ಬಿಜೆಪಿ ಶಾಸಕರ ನಡುವೆ ಜಟಾಪಟಿ
ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಮತ್ತು ಔಷಧಿ,ಉಪಕರಣ ಖರೀದಿಯಲ್ಲಿ ಅವ್ಯವಹಾರ ಕುರಿತ ನಿಯಮ 69ರ ಮೇ ಲಿನ ಚರ್ಚೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉತ್ತರ ನೀಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್ ‘ಹಲ್ಕಾ’ಎಂಬ ಪದ ಬಳಕೆ ಮಾಡಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.