Excise Department

ನೀರಾವರಿ ಇಲಾಖೆ ಬಳಿಕ ಇದೀಗ ಅಬಕಾರಿ ಇಲಾಖೆಯ ಅಕ್ರಮ ಬಯಲು: ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ನೀರಾವರಿ ಇಲಾಖೆಯ ರೂ.20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ.

ಅಬಕಾರಿ ಇಲಾಖೆಯಿಂದ ಕಳೆದ 9 ತಿಂಗಳಲ್ಲಿ ದಿನಕ್ಕೆ 45 ದಾಳಿ
ಅಕ್ರಮ ಮಧ್ಯಘಟಕಗಳ ಮೇಲೆ ಅಬಕಾರಿ ಇಲಾಖೆಯು 2020ರ ಜುಲೈನಿಂದ ದಿನಕ್ಕೆ ಸರಾಸರಿ 45ದಾಳಿ ನಡೆಸಿದೆ.

ಅಬಕಾರಿ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್! ಶೀಘ್ರವೇ ವೇತನ ಹೆಚ್ಚಳಕ್ಕೆ ಪ್ರಸ್ತಾಪ: ಸಚಿವ ಎಚ್.ನಾಗೇಶ್
ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳ ಪ್ರಕಾರ ವೇತನ ಹೆಚ್ಚಳ ಪಡೆದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಈಗ ಹೆಚ್ಚಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಇತ್ತ ಅಬಕಾರಿ ಇಲಾಖೆ ಪೊಲೀಸ್ ಇಲಾಖೆಗೆ ಸಮನಾಗಿ ವೇತನ ಪರಿಷ್ಕರಣೆ ಮಾಡುವ ಪ್ರಸ್ತಾಪ ಇಟ್ಟಿದೆ.

ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ- ಅಬಕಾರಿ ಸಚಿವ ನಾಗೇಶ್
ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

ಮದ್ಯದಂಗಡಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು
ಮುಂಬರುವ ವಿಧಾನಸಭೆ ಚುನಾವಣೆಯ ಪರಿಣಾಮವಿದು. ರಾಜ್ಯದ ಮದ್ಯ ಮಾರಾಟಗಾರರು ತಾವು...

ರಾತ್ರಿ 1ರವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಅವಧಿ ವಿಸ್ತರಣೆ: ಅಬಕಾರಿ ಸಚಿವ ಹೆಚ್ ವೈ ಮೇಟಿ
ಮದ್ಯಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಕರ್ನಾಟಕ ಸರ್ಕಾರ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.

ಡಾಬಾಗಳಲ್ಲಿ ಮದ್ಯ ಮಾರಾಟ ಮಾಡಿದರೆ 10 ಸಾವಿರ ರೂ ದಂಡ!
ಡಾಬಾಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಮದ್ಯ ಮಾರಾಟ, ಸೇವನೆಗೆ ಕಡಿವಾಣ ಹಾಕಲು ದೆಹಲಿ ಸರ್ಕಾರದ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳಲು ಮುಂದಾದೆ.

