excise policy case

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

'ಕೇಜ್ರಿವಾಲ್ ಬಗ್ಗೆ ಸಂಪೂರ್ಣ ನಿರಾಶೆಯಾಗಿದೆ': ಅಬಕಾರಿ ನೀತಿ ಹಗರಣ ಕುರಿತು ನಿವೃತ್ತ ನ್ಯಾ. ಎನ್ ಸಂತೋಷ್ ಹೆಗ್ಡೆ
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುರಿತು ನನಗೆ ಸಂಪೂರ್ಣ ನಿರಾಶೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಹಾಗೂ ನಿವೃತ್ತ ಲೋಕಾಯುಕ್ತ ಎನ್ ಸಂತೋಷ್ ಹೆಗ್ಡೆ ಶುಕ್ರವಾರ ಹೇಳಿದ್ದಾರೆ.

ತಮ್ಮ ಕೃತ್ಯಗಳಿಂದಲೇ ಕೇಜ್ರಿವಾಲ್ ಬಂಧನ: ಅಣ್ಣಾ ಹಜಾರೆ
ತಮ್ಮ ಕೃತ್ಯಗಳಿಂದಲೇ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ ಎಂದು ಖ್ಯಾತ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 5ನೇ ಬಾರಿ ಇಡಿ ಸಮನ್ಸ್ ಜಾರಿ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಐದನೇ ಬಾರಿ...

ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಜನವರಿ 10 ರವರೆಗೆ ವಿಸ್ತರಣೆ
ರದ್ದಾದ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ ಮನೀಶ್ ಸಿಸೋಡಿಯಾ...

ದೆಹಲಿ ಅಬಕಾರಿ ಹಗರಣ: ಜೂನ್ 2ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2ವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಪ್ರಕರಣ: 2 ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಜಾಮೀನು; ಕ್ಷಮೆಯಾಚಿಸುವಂತೆ ಬಿಜೆಪಿಗೆ ಎಎಪಿ ಒತ್ತಾಯ
ಅಬಕಾರಿ ನೀತಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ಬಳಿಕ ಪಕ್ಷದ ವಿರುದ್ಧ 'ಸುಳ್ಳು' ಆರೋಪ ಮಾಡಿದ್ದಕ್ಕಾಗಿ ಬಿಜೆಪಿ ನ್ಯಾಯಾಲಯದ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ಅರವಿಂದ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ವಿರೋಧಿಸಿ ಎಎಪಿ ಮುಖಂಡರು, ಕಾರ್ಯಕರ್ತರಿಂದ ದೆಹಲಿಯಾದ್ಯಂತ ಪ್ರತಿಭಟನೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

ದೆಹಲಿ ಮದ್ಯ ಹಗರಣ: ಎಎಪಿ ಹಣಿಯಲು ನಿರಂತರ ಪ್ರಯತ್ನವಾಗುತ್ತಿದೆ; ಸಿಬಿಐ ಸಮನ್ಸ್ ಕುರಿತು ಕೇಜ್ರಿವಾಲ್ ಹೇಳಿಕೆ
ಎಎಪಿ ಪಕ್ಷ ದೇಶಕ್ಕೆ ಭರವಸೆಯ ಕಿರಣವಾಗಿ ಹೊರಹೊಮ್ಮಿದ್ದು, ಅದನ್ನು ಹಣಿಯುವ ಉದ್ದೇಶದಿಂದಲೇ ಮತ್ತು ಅದಕ್ಕಾಗಿಯೇ ಅದನ್ನು ತುಳಿಯಲು ಪ್ರಯತ್ನಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

