ದೇಶವಿದೇಶದಿಂದ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು ವಾಪಸ್ ಕರೆತರಲು ವಂದೇ ಭಾರತ್ ಮಿಷನ್ ವಿಸ್ತರಣೆ
ಎರಡನೇ ಹಂತದ ವಂದೇ ಭಾರತ್ ಮಿಷನ್ ಅಡಿಯಲ್ಲಿ 60 ರಾಷ್ಟ್ರಗಳಲ್ಲಿ ಸಿಲುಕಿರುವ ಸುಮಾರು 1 ಲಕ್ಷ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ತರಲು ಕೇಂದ್ರಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.