Expell

ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ; ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ; ಕಾರ್ಯಕಾರಿ ಸಮಿತಿ ವಿಸರ್ಜನೆ
ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಗರದ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಸ್‌ಪಿ ನಾಯಕನ ಮಗಳ ಜೊತೆ ಓಡಿಹೋದ ಬಿಜೆಪಿ ನಾಯಕ; ಪಕ್ಷದಿಂದ ಉಚ್ಛಾಟಿಸಿದ ಕೇಸರಿ ಪಡೆ
ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಆಡಳಿತಾರೂಢ ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರ ಮಗಳಿಗೆ ಆಮಿಷವೊಡ್ಡಿದ್ದಾರೆ ಮತ್ತು ಇತ್ತೀಚೆಗೆ ಆಕೆಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ; ಮೂವರು ಸದಸ್ಯರನ್ನು ಉಚ್ಚಾಟಿಸಿದ ಬಿಎಸ್‌ಪಿ
ಯಮುನಾನಗರ ಜಿಲ್ಲಾ ಪರಿಷತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದಕ್ಕಾಗಿ ಬಹುಜನ ಸಮಾಜ ಪಕ್ಷವು ತನ್ನ ಮೂವರು ಸದಸ್ಯರನ್ನು ಉಚ್ಚಾಟಿಸಿದೆ.

ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಬಿಎಸ್ ಪಿ ಶಾಸಕರ ಉಚ್ಛಾಟನೆ
ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಇಬ್ಬರು ಬಿಎಸ್ ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿ ಟಿ.ಟಿ ಶ್ರೀನಿವಾಸ್ ಬಿಜೆಪಿಯಿಂದ ಉಚ್ಛಾಟನೆ
ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ

ಯತ್ನಾಳ್ ವಿರುದ್ದ ತಿರುಗಿಬಿದ್ದ ಬಿಜೆಪಿ ಜಿಲ್ಲಾ ಸಮಿತಿ: ಪಕ್ಷದಿಂದ ಹೊರಹಾಕುವಂತೆ ಒತ್ತಾಯ?
ಪ್ರವಾಹ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ತಿರುಗಿಬಿದ್ದಿದ್ದು, ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಮಾಜವಾದಿ ಪಕ್ಷದಲ್ಲಿ ಭಿನ್ನಮತ: ಅಖಿಲೇಶ್ ಯಾದವ್ ನಿಷ್ಠಾವಂತ ಉದಯ್ ವೀರ್ ಸಿಂಗ್ ವಜಾ
ಸಮಾಜವಾದಿ ಪಕ್ಷದೊಳಗಿನ ಭಿನ್ನಮತ ಮತ್ತೆ ಭುಗಿಲೇಳುವ ಸಾಧ್ಯತೆಯಿದ್ದು ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿ...

