ದೇಶಕೊವಿಡ್-19: ತೆಲಂಗಾಣದಲ್ಲಿ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೆಸಿಆರ್
ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕುವುದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಮೇ 29ರ ವರೆಗೆ ವಿಸ್ತರಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.