ರಾಜ್ಯಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ ನಾಲ್ವರು ಚಾರಣಿಗರು ಸಾವು
ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೇಳಿದರು.