ರಾಜ್ಯನಕಲಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್
ಲೋಕಸಭೆ ಚುನಾವಣೆಯ ಸಮಯದಲ್ಲಿ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಮಾಡಿದ್ದರೆಂಬ ಆರೋಪದ ಕುರಿತು ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಸಂಸದರ ಸದಸ್ಯತ್ವ ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.