ರಾಜ್ಯನೂತನ ಶಾಸಕ ಮುನಿರತ್ನಗೆ ಹೈಕೋರ್ಟ್ ಶಾಕ್! ನಕಲಿ ಗುರುತಿನ ಚೀಟಿ ಪ್ರಕರಣದ ಪರಿಶೀಲನೆಗೆ ಸೂಚನೆ
ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.