ರಾಜ್ಯಮಹಡಿಯಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಸಾವು; 2ನೇ ಪತ್ನಿ ವಿರುದ್ಧ ಕೊಲೆ ಆರೋಪ ಮಾಡಿದ ಮೊದಲ ಪತ್ನಿ
ಮಾರತ್ತಹಳ್ಳಿಯ ಎಂಪಿಎಲ್ ಲೇಔಟ್ನ ವಸತಿ ಸಮುಚ್ಚಯದ ನಾಲ್ಕನೇ ಮಹಡಿಯಿಂದ ಬಿದ್ದು ಗುರುವಾರ ಬೆಳಗ್ಗೆ 63 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದು, ಆಸ್ತಿಗಾಗಿ ಎರಡನೇ ಪತ್ನಿಯೇ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೊದಲ ಪತ್ನಿ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.