Farm Law

ಕೃಷಿ ಕಾಯ್ದೆ ರದ್ದು: ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್ ಗಡಿ ಭಾಗ ತೊರೆದ ರೈತರು, ಸಂಭ್ರಮಾಚರಣೆ
ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದು ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಯಿಂದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಸೇರಿದಂತೆ ಹಲವು ಸಂಘಟನೆಗಳು ವಿಜಯೋತ್ಸವ ಆಚರಿಸುತ್ತಾ ಸ್ಥಳವನ್ನು ತೊರೆದಿದ್ದಾರೆ.

ಕೃಷಿ ಮಸೂದೆ ರದ್ದು ನಮಗೆ ಸಿಕ್ಕ ದೊಡ್ಡ ಗೆಲುವು ಆದರೂ ನಮ್ಮ ಪ್ರತಿಭಟನೆ ನಿಲ್ಲಲ್ಲ: ರಾಜ್ಯ ರೈತರು
ಕೃಷಿ ಕಾನೂನುಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮವು ರೈತರ ಆಂದೋಲನಕ್ಕೆ ಸಂದ ಜಯ ಎಂದು ಕರ್ನಾಟಕದ ರೈತ ಮುಖಂಡರು ಬಣ್ಣಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಪಡಿಸುವ ಕಾನೂನು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಹೆದ್ದಾರಿ ಬಂದ್, ಸಂಚಾರ ಅಸ್ತವ್ಯಸ್ತ
ದೆಹಲಿ ರೈತ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಕರೆಯಂತೆ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275 , ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ ಸಂದಿಸುವ ಶ್ರೀರಂಗಪಟ್ಟಣ ಬಳಿಯ ಕಿರಂಗೂರು ಸರ್ಕಲ್ ನಲ್ಲಿ ಸಹಸ್ರಾರು ರೈತರು ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.

ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಂಡಿಸಲಾಗುವುದು: ಕೇಂದ್ರ ಕೃಷಿ ಸಚಿವ
ಕಳೆದ ವರ್ಷ ಕೇಂದ್ರ ಸರ್ಕಾರ ತಂದಿದ್ದ ಮೂರು ತಿದ್ದುಪಡಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನದ ಕಲಾಪದಲ್ಲಿಯೇ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಹೇಳಿದ್ದಾರೆ.

ಕೃಷಿ ಮಸೂದೆ: ಕೇಂದ್ರ ಸರ್ಕಾರದ ನಿರ್ಧಾರ ಶ್ಲಾಘಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ಈ ಹಿಂದೆಯೇ ಹಿಂತೆಗೆದುಕೊಳ್ಳುವ ಘೋಷಣೆ ಮಾಡಬೇಕಿತ್ತು ಎಂದು ಒಪ್ಪಿಕೊಂಡಿರುವ ಬಿಜೆಪಿ ಹಿರಿಯ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಸ್ವಲ್ಪ ತಡವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಹೇಳಿದ್ದಾರೆ.

ಸಿಕ್ಕಿರುವುದು ಅರ್ಧ ಜಯವಷ್ಟೇ; ರಾಜ್ಯದಲ್ಲಿಯೂ ಕಾಯ್ದೆ ರದ್ದುಪಡಿಸಬೇಕು: ರೈತ ಮುಖಂಡರ ಆಗ್ರಹ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ರಾಜ್ಯದಲ್ಲಿಯೂ ಸರ್ಕಾರವು ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆ ತರಲಾಗಿರುವ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು ಎಂದು ಕೃಷಿ ತಜ್ಞರು ಮತ್ತು ರೈತ ಮುಖಂಡರು ಆಗ್ರಹಿಸಿದ್ದಾರೆ.

ಕೃಷಿ ಕಾನೂನುಗಳ ವರದಿಯನ್ನು ನ್ಯಾಯಾಲಯ ಬಿಡುಗಡೆ ಮಾಡದಿದ್ದರೆ ನಾವೇ ಬಿಡುಗಡೆ ಮಾಡುತ್ತೇವೆ: ಸುಪ್ರೀಂ ಕೋರ್ಟ್ ಸಮಿತಿ ಸದಸ್ಯ!
ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ವಿವಾದಿತ 3 ಕೃಷಿ ಕಾಯ್ದೆಗಳ ಹಿಂಪಡೆದ ಕೇಂದ್ರ ಸರ್ಕಾರ: ಘಾಜಿಪುರ ಗಡಿಯಲ್ಲಿ ಸಿಹಿ ಹಂಚಿ ರೈತರ ಸಂಭ್ರಮ!
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಘಾಜಿಪುರದಲ್ಲಿ ರೈತರು ಸಿಹಿ ಹಂಚಿ ಸಂಭ್ರಮವನ್ನಾಚರಿಸುತ್ತಿದ್ದಾರೆ.

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್
ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

