Farm Law

ಪ್ರತಿಭಟನಾ ನಿರತ ರೈತರು ಶೀಘ್ರದಲ್ಲೇ ಮತ್ತೆ ಮಾತುಕತೆಗೆ ಬರುವ ವಿಶ್ವಾಸವಿದೆ: ನರೇಂದ್ರ ಸಿಂಗ್ ತೋಮರ್
ಪ್ರತಿಭಟನಾ ನಿರತ ರೈತರು ಶೀಘ್ರದಲ್ಲೇ ಮತ್ತೆ ಮಾತುಕತೆ ಬರುವ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

'ಮುಕ್ತ ಮನಸ್ಸಿನ' ಮಾತುಕತೆಗೆ ದಿನಾಂಕ ಆಯ್ಕೆ ಮಾಡಿ: ರೈತರಿಗೆ ಕೇಂದ್ರ ಸರ್ಕಾರ ಆಹ್ವಾನ
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಮ್ಯಾರಥಾನ್ ಪ್ರತಿಭಟನೆಯನ್ನು ಶತಾಯಗತಾಯ ನಿಲ್ಲಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಸಂಧಾನ ಮಾತುಕತೆಗೆ ದಿನಾಂಕ ಆಯ್ಕೆ ಮಾಡುವಂತೆ ಮನವಿ ಮಾಡಿದೆ.

ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರ್ಯಾಣ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ಪ್ರಯೋಜನ ಕುರಿತು ಜಾಗೃತಿ: ಯಡಿಯೂರಪ್ಪ ಸಂಪುಟ ಸದಸ್ಯರಿಂದ ಜನವರಿಯಲ್ಲಿ ರಾಜ್ಯ ಪ್ರವಾಸ
ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳಿಂದಾಗುವ ಪ್ರಯೋಜನಗಳ ಬಗ್ಗೆ ರೈತರು, ರೈತ ಸಂಘಟನೆಗಳಲ್ಲಿ ಅರಿವು ಮೂಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಎಲ್ಲ ಸಚಿವರು ಜನವರಿ ತಿಂಗಳಿನಲ್ಲಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.

ದೆಹಲಿ: ರೈತರ ಪ್ರತಿಭಟನೆ ವೇಳೆ 22 ರೈತರ ಸಾವು; ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ
ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ.

ಸರ್ಕಾರದ ವಿರುದ್ಧದ ಪಿತೂರಿಯ ಭಾಗವಾಗಿ ರೈತರನ್ನು ದಾರಿ ತಪ್ಪಿಸಲಾಗಿದೆ: ಪ್ರಧಾನಿ ನರೇಂದ್ರ ಮೋದಿ
ಕೇಂದ್ರ ಸರ್ಕಾರದ ವಿರುದ್ಧದ ಯೋಜಿತ ಪಿತೂರಿಯ ಭಾಗವಾಗಿ ಪ್ರತಿಭಟನಾ ನಿರತ ರೈತರನ್ನು ದಾರಿ ತಪ್ಪಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರತಿಭಟನೆಯ ಜೊತೆಗೆ ರೈತರಿಂದ ಉಪವಾಸ ಸತ್ಯಾಗ್ರಹ: ಪ್ರತಿಯಾಗಿ ಬಿಜೆಪಿಯಿಂದ ಜಾಗೃತಿ ಅಭಿಯಾನ
ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕೃಷಿ ಮಸೂದೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ರೈತರ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ.

ಪ್ರತಿಭಟನೆ ಹಿಂದೆ ಯಾರಿದ್ದಾರೆ, ಮಾಧ್ಯಮಗಳು ತನಿಖೆ ಮಾಡಲಿ: ತೋಮರ್, ಗೋಯಲ್; ಆರೋಪ ತಳ್ಳಿಹಾಕಿದ ರೈತ ಸಂಘಟನೆಗಳು
ರಾಷ್ಟ್ರ ರಾಜಧಾನಿಯ ಹಲವು ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗಳ ಹಿಂದೆ ಯಾವುದಾದರೂ ಶಕ್ತಿ ಅಥವಾ ಯಾರಾದರೂ ಕುತಂತ್ರ ನಡೆಸುತ್ತಿದ್ದಾರೆಯೇ ಎಂದು ಮಾಧ್ಯಮಗಳು ಕಂಡುಹಿಡಿಯಬೇಕು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಹಾಗೂ ಆಹಾರ ಖಾತೆ ಸಚಿವ ಪಿಯೂಷ್ ಗೋಯಲ್ ಒತ್ತಾಯಿಸಿದ್ದಾರೆ.

ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳುತ್ತೇವೆ: ರೈತ ಮುಖಂಡರು
ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ.

