Farmer protest

ಐದನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಬಿಜೆಪಿ ನಾಯಕರ ನಿವಾಸದ ಹೊರಗಡೆ ರೈತರ ಪ್ರತಿಭಟನೆ
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಪಂಜಾಬಿನ ಮೂವರು ಬಿಜೆಪಿ ನಾಯಕರ ನಿವಾಸಗಳ ಹೊರಗೆ ಭಾರತಿ ಕಿಸಾನ್ ಯೂನಿಯನ್ ಧರಣಿ ನಡೆಸಲಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರೈತರಿಂದ 'ಬೆಂಗಳೂರು ಚಲೋ' ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮಂಗಳವಾರ ಬೆಂಗಳೂರು ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಪ್ರಾಂತೀಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಜಂಟಿಯಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ರೈತರು ಪಾಲ್ಗೊಂಡರು.

ರೈತ ವಿರೋಧಿ ಕಾನೂನುಗಳ ವಿರುದ್ಧ ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆ
ಸಂಯುಕ್ತ ಕಿಸಾನ್ ಮೋರ್ಚಾವು ಕೇಂದ್ರ ಸರ್ಕಾರದ 'ರೈತ ವಿರೋಧಿ' ಕಾನೂನುಗಳು ಮತ್ತು ಇತರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ದೇಶದಾದ್ಯಂತ ಐದು ಲಕ್ಷಕ್ಕೂ ಹೆಚ್ಚು ರೈತರು ರಾಷ್ಟ್ರ ರಾಜಧಾನಿಯಲ್ಲಿ ಸೇರುವ ನಿರೀಕ್ಷೆಯಿದೆ.

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ, ರೈತರ ಹಿತ ಕಾಯುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ
ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.

ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ಕಾಂಗ್ರೆಸ್ ಬೆಂಬಲ
ಎಪಿಎಂಸಿ ಕಾಯ್ದೆ ಮತ್ತು ರಾಜ್ಯ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಹೋರಾಟವನ್ನು ತೀವ್ರಗೊಳಿಸಲು, ರೈತರು, ದಲಿತ ಮತ್ತು ಕಾರ್ಮಿಕ ಸಂಘಟನೆಗಳನ್ನೊಳಗೊಂಡ ಸಂಯುಕ್ತ ಹೋರಾಟ ಕರ್ನಾಟಕ ನಿರ್ಧರಿಸಿದೆ.

ಸಿಂಘು ಗಡಿ ಹತ್ಯೆ: ಸೋನಿಪತ್‌ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಹರಿಯಾಣ ಪೊಲೀಸರು
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಸೋನಿಪತ್‌ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು
ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ- ರಾಷ್ಟ್ರೀಯ ಕಿಸಾನ್ ಮಂಚ್
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಟನಾನಿರತ ರೈತರು ಆಡಳಿತರೂಢ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮತ ಚಲಾಯಿಸುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಠ ಕಲಿಸಲಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ಮಂಗಳವಾರ ಹೇಳಿದೆ.

