farmers

ಕಬಿನಿ ಜಲಾಶಯ ಬಹುತೇಕ ಭರ್ತಿ: ರೈತರಲ್ಲಿ ಹರ್ಷ
ಬುಧವಾರ ಜಲಾಶಯದ ನೀರಿನ ಮಟ್ಟ 2,279.54 ಅಡಿಗಳಷ್ಟಿತ್ತು, ಪೂರ್ಣ ಜಲಾಶಯದ ಮಟ್ಟ 2,284 ಅಡಿಗಳಷ್ಟಿದೆ.

'ರೈತರಿಂದ ಬಂದ ಹೆಚ್ಚುವರಿ ಹಾಲನ್ನು ರೋಡ್ ಗೆ ಚೆಲ್ಬೇಕಾ, ಪ್ರಮಾಣ ಹೆಚ್ಚಿಸಿ ಮಾರಾಟ ಹೊರತು ಹಾಲಿನ ದರ ಹೆಚ್ಚಾಗಿಲ್ಲ': ಸಿಎಂ ಸಿದ್ದರಾಮಯ್ಯ
ಯಾರು ಹಾಲಿನ ದರ ಹೆಚ್ಚಳ ಮಾಡಿದ್ದಾರೆ, ಮೊದಲಿದ್ದಷ್ಟೇ ಹಾಲಿನ ದರವಿದೆ, ಹಾಲಿನ ದರ ಏರಿಕೆ ಮಾಡಿಲ್ಲ, ನೀವು ಏನೇನೋ ಬರೆದು ಜನರಿಗೆ ತಪ್ಪು ಮಾಹಿತಿ ನೀಡಿ ಅವರ ದಾರಿ ತಪ್ಪಿಸಬೇಡಿ ಎಂದು ಸಿಎಂ ಸಿಡಿಮಿಡಿಗೊಂಡರು.

ಟೊಮೆಟೊ ಬೆಲೆ 100 ರೂ. ದಾಟಿದರೂ ರೈತರ ಮುಖದಲ್ಲಿ ಮಂದಹಾಸ ಮಾಯ: ಕೊಳೆ ರೋಗದಿಂದ ಬೆಳೆ ಹಾನಿ
ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕೆಜಿಗೆ 100 ರೂಪಾಯಿಗೆ ಏರಿಕೆಯಾಗಿದೆ. ಆದರೆ ರೈತರಿಗೆ ಇದು ಸಿಹಿ ಸುದ್ದಿಯಲ್ಲ, ಏಕೆಂದರೆ ಅವರ ಬೆಳೆಗೆ ಕೊಳೆ ರೋಗ(Wilt disese) ಬಂದು ಬಹುತೇಕ ಬೆಳೆಗಳು ಹಾನಿಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

MSP ಗೆ ಕಾನೂನು ಖಾತರಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕುರುಬೂರು ಶಾಂತಕುಮಾರ್ ಒತ್ತಾಯ
ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರದ ಅನುದಾನವನ್ನು ಹೆಚ್ಚಿಸುವಲ್ಲಿ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಕಾರಾತ್ಮಕ ಪಾತ್ರ ವಹಿಸಬೇಕು ಮತ್ತು ಈ ಪ್ರಕ್ರಿಯೆಗೆ ಕಾನೂನು ಖಾತರಿ ನೀಡಲು ಕಾನೂನನ್ನು ಅಂಗೀಕರಿಸಬೇಕು ಎಂದು ರಾಜ್ಯ ರೈತ ಸಂಘಗಳ ಒಕ್ಕೂಟವು ಒತ್ತಾಯಿಸಿದೆ.

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!
ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

5 ರಾಜ್ಯಗಳಲ್ಲಿ 38 ಸೀಟು ಕಳೆದುಕೊಂಡ ಬಿಜೆಪಿ: ರೈತರ ಕಡೆಗಣಿಸಿದ್ದಕ್ಕೆ ಬೆಲೆ ತೆತ್ತಿತೇ ಕಮಲ ಪಡೆ?
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಿದೆ. ಸಂಸತ್‌ನಲ್ಲಿನ ಅಗತ್ಯ ಬಹುಮತಕ್ಕಿಂತ 20 ಸ್ಥಾನಗಳನ್ನು ಅಧಿಕವಾಗಿಯೇ ಗೆದ್ದಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಕಮಲ ಪಡೆ ಹಲವೆಡೆ ತಮ್ಮ ಬಲವನ್ನು ಕಳೆದುಕೊಂಡಿದೆ. 5 ರಾಜ್ಯಗಳಲ್ಲಿ 38 ಸೀಟುಗಳನ್ನು ಬಿಜೆಪಿ ಕಳೆದುಕೊಂಡಿದೆ.

ಮಾವು ಮೇಳದಲ್ಲಿ ಸೀಮಿತ ಮಳಿಗೆಗಳಿಗೆ ಅವಕಾಶ: ರೈತರು, ವ್ಯಾಪಾರಸ್ಥರು ಬೇಸರ!
ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಮಾವು ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ತೋಟಗಾರಿಕೆ ಇಲಾಖೆ ಗುರುವಾರದಿದ ಮಾವು ಮಾರಾಟ ಮತ್ತು ಪ್ರದರ್ಶನ ಮೇಳವನ್ನು...

ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ಬಿತ್ತನೆ ಬೀಜ ದಾಸ್ತಾನಿದ್ದು, ರಸಗೊಬ್ಬರದ ಕೊರತೆಯೂ ಇಲ್ಲ: ಸಚಿವ ಚಲುವರಾಯಸ್ವಾಮಿ
ರೈತರಿಗೆ ವಿತರಿಸಲು ರಾಜ್ಯದಲ್ಲಿ ಸಾಕಷ್ಟು ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

ಬರಗಾಲದ ನಡುವೆ ಗಾಳಿ-ಮಳೆ: ರಾಜ್ಯದ ವಿವಿಧ ಜಿಲ್ಲೆಗಳ ರೈತರ ಬದುಕು-ಬವಣೆಯ ಕುರಿತ ವರದಿ....
ಚಾಮರಾಜನಗರ, ಮಂಡ್ಯ, ಮೈಸೂರು, ಹಾವೇರಿ ಮತ್ತು ಕಲಬುರಗಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಅವಲಂಬಿಸಿರುವ ರೈತರು ತಮ್ಮ ಬಾಳೆ, ಈರುಳ್ಳಿ ಮತ್ತು ಟೊಮೆಟೊ ಬೆಳೆಗಳನ್ನು ಕಳೆದುಕೊಂಡಿದ್ದಾರೆ.

