ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶನಿವಾರ ನಡೆದ ಪ್ರಥಮ ದರ್ಜೆ ಸಹಾಯಕರ ಪ್ರವೇಶ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಅಭ್ಯರ್ಥಿಗಳು ಹಾಗೂ ಅವರಿಗೆ ಸಹಾಯ ಮಾಡಿದವರು ಸೇರಿದಂತೆ 21 ಮಂದಿಯನ್ನು ಕಲಬುರಗಿ ಮತ್ತು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.