ರಾಜ್ಯಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಕಡಿತ: ರಾಜ್ಯ ಸರ್ಕಾರ ನಿರ್ಧಾರ
ರಾಜ್ಯದ ವಿವಿಧ ವಿಭಾಗಗಳ ಅಡಿಯಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕಾಲೇಜುಗಳ ಶುಲ್ಕವನ್ನು ಉನ್ನತ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. 2023-24ರ ಶೈಕ್ಷಣಿಕ ವರ್ಷಕ್ಕೆ ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳವನ್ನು ಶೇಕಡಾ 10ರಿಂದ ಶೇಕಡಾ 7ಕ್ಕೆ ಇಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಕಳೆದ ವಾರ ಘೋಷಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.