ರಾಜ್ಯಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ, ಇಬ್ಬರು ಅಧಿಕಾರಿಗಳ ಅಮಾನತು- ದಿನೇಶ್ ಗುಂಡೂರಾವ್
ಭ್ರೂಣ ಹತ್ಯೆ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸಿ ಮಂಡ್ಯದಲ್ಲಿನ ಭ್ರೂಣ ಹತ್ಯೆ ಪ್ರಕರಣವನ್ನು 'ಸಿಐಡಿ' ತನಿಖೆಗೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.