ಸಿನಿಮಾ ಸುದ್ದಿಚಿತ್ರರಂಗದಲ್ಲಿ 23 ವಸಂತಗಳನ್ನು ಕಳೆದ 'ಚಾಲೆಂಜಿಂಗ್ ಸ್ಟಾರ್ ದರ್ಶನ್': 'ರಾಬರ್ಟ್' ನಿರೀಕ್ಷೆಯಲ್ಲಿ ಅಭಿಮಾನಿಗಳು!
ಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ದರ್ಶನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಆಗಸ್ಟ್ 11ಕ್ಕೆ 23 ವರ್ಷಗಳನ್ನು ಪೂರೈಸುತ್ತಿದ್ದಾರೆ. ಈ ಸಂದರ್ಭವನ್ನು ಅತ್ಯಂತ ಉತ್ಸಾಹ, ಸಂತೋಷದಿಂದ ಆಚರಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.