Final rites

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟ ಶಿವರಾಂ ಅಂತಿಮ ದರ್ಶನ: ಮಧ್ಯಾಹ್ನ ಅಂತ್ಯಕ್ರಿಯೆ
ನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ.

ಮಣ್ಣಲ್ಲಿ ಮಣ್ಣಾದ ಕನ್ನಡಿಗರ ಕಣ್ಮಣಿ 'ಅಪ್ಪು': ಸಿಎಂ ಬಸವರಾಜ ಬೊಮ್ಮಾಯಿ ಭಾವಪೂರ್ಣ ವಿದಾಯ
ಕಳೆದ ಶುಕ್ರವಾರ ತೀವ್ರ ಹೃದಯಾಘಾತದಿಂದ ನಿಧನರಾದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನೆರವೇರಿತು.

'ಅಪ್ಪು' ಉಳಿಸಿಕೊಳ್ಳಲಾಗಲಿಲ್ಲ; ಶಾಂತಿಯುತವಾಗಿ ಕಳಿಸಿಕೊಡೋಣ: ರಾಘವೇಂದ್ರ ರಾಜ್ ಕುಮಾರ್ ಮನವಿ
ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಅವರ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಡಾ. ರಾಜ್ ಅವರ ಐವರು ಮಕ್ಕಳಲ್ಲಿ ಕಿರಿಯರು. ಹೀಗಾಗಿ ಎಲ್ಲರಿಗೂ ಅಚ್ಚುಮೆಚ್ಚು. ಇಂತಹ ಮನೆಮಗನನ್ನು ಕಳೆದುಕೊಂಡು ಎಲ್ಲರೂ ಕಣ್ಣೀರಾಗಿದ್ದರೂ, ಇದರ ನಡುವೆಯೇ ಮುಂದಿನ ಕಾರ್ಯದತ್ತ ಗಮನಹರಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅಂತಿಮ ದರ್ಶನ: ಪ್ಯಾಟ್ರಿಕ್ ಚರ್ಚ್ ನಲ್ಲಿ ಅಂತ್ಯಕ್ರಿಯೆ
ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಕಳೆದ ರಾತ್ರಿ ಬೆಂಗಳೂರು ತಲುಪಿದ್ದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನದವರೆಗೆ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಲ್ಯಾಣ್ ಸಿಂಗ್ ಅವರು ಕಂಡಿದ್ದ ಕನಸುಗಳನ್ನು ನಾವು ಈಡೇರಿಸಬೇಕು: ಅಂತಿಮ ದರ್ಶನ ಬಳಿಕ ಮಾತನಾಡಿದ ಪಿಎಂ ನರೇಂದ್ರ ಮೋದಿ
ನಾವು ದೇಶದ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಕಲ್ಯಾಣ್ ಸಿಂಗ್ ಅವರ ಮೌಲ್ಯಗಳು ಮತ್ತು ನಿರ್ಣಯಗಳನ್ನು ನಮ್ಮ ಕೆಲಸಗಳಲ್ಲಿ ಅಳವಡಿಸಿಕೊಂಡು ಅವರಿಗೆ ಪರ್ಯಾಯವಾಗಿ ಸಾಧ್ಯವಾದಷ್ಟು ಬಳಸಿಕೊಳ್ಳಲು ಪ್ರಯತ್ನಿಸೋಣ, ಅವರು ಕಂಡಿದ್ದ ಕನಸುಗಳನ್ನು ನನಸು ಮಾಡಲು ಶ್ರಮಿಸೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದರ ನಡುವೆ ಶವ ಸಂಸ್ಕಾರವೂ ದುಬಾರಿ!
ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ, ಸುಗಮವಾಗಿ ನಡೆಸಿಕೊಡಲಾಗುತ್ತಿದೆ ಎಂದು ಸರ್ಕಾರ ಹೇಳುತ್ತಿದ್ದರೂ ವಾಸ್ತವ ಪರಿಸ್ಥಿತಿ ಭಿನ್ನವಾಗಿದೆ.

ಭೂ ತಾಯಿಯ ಮಡಿಲು ಸೇರಿದ ಸ್ವರ ಮಾಂತ್ರಿಕ ಎಸ್.ಪಿ. ಬಾಲಸುಬ್ರಹ್ಮಣ್ಯಂ
ಸ್ವರ ಮಾಂತ್ರಿಕ, ನಟ, ಸಂಗೀತ ಸಂಯೋಜಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದೆ. ಸಾವಿರಾರು ಹಾಡುಗಳ ಸರದಾರ ಸಪ್ತ ಸ್ವರವೇರಿ ಗಾನ ಸರಸ್ವತಿಯ ಮಡಿಲು ಸೇರಿದ್ದಾರೆ.

ಬಾರದೂರಿಗೆ ಹೊರಟು ನಿಂತ 'ಬಾಲು': ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಅಂತ್ಯಕ್ರಿಯೆ
ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರುತ್ತಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಮೃತರ ಅಂತ್ಯಸಂಸ್ಕಾರ ವೇಳೆ ಅಮಾನವೀಯ ವರ್ತನೆ: ಸಿಬ್ಬಂದಿ ಅಮಾನತು
ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಶವಗಳನ್ನು ಅಮಾನವೀಯ ರೀತಿಯಲ್ಲಿ ಗುಂಡಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಮೊದಲಾದವರು ಪ್ರತಿಕ್ರಿಯಿಸಿದ್ದಾರೆ.

