ರಾಜ್ಯತೆರಿಗೆ ಸಂಗ್ರಹ ಹೆಚ್ಚಿಸಿ, ಭ್ರಷ್ಟಾಚಾರ ತಗ್ಗಿಸಿ, ಹಣಕಾಸು ಪರಿಸ್ಥಿತಿ ನಿಭಾಯಿಸಿದ್ದೇವೆ; ಮೀಸಲಾತಿ ಬಗ್ಗೆ ಪ್ರತಿಭಟಿಸುವುದರಲ್ಲಿ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ಮೇ 20, ಸೋಮವಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಖಾತರಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.