fine

ಎಂಡಿ ಸೀಟು ಹಂಚಿಕೆ ಪ್ರಕರಣ: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ
ರಾಜೀವ್ ಗಾಂಧಿ ಉಸಿರಾಟ ಮತ್ತು ಎದೆ ರೋಗಗಳ ಸಂಸ್ಥೆಯಲ್ಲಿ ಡಾಕ್ಟರ್ ಆಫ್ ಮೆಡಿಸಿನ್ (ಎಂ ಡಿ) ರೆಸ್ಪಿರೇಟರಿ ಮೆಡಿಸಿನ್‌ನಲ್ಲಿ ಅಕ್ರಮವಾಗಿ ಸೀಟು ಹಂಚಿಕೆ ಮಾಡಿದ್ದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

ಟಿಕೆಟ್ ರಹಿತ ಪ್ರಯಾಣ: 7.83 ಲಕ್ಷ ರೂ. ದಂಡ ವಸೂಲಿ ಮಾಡಿದ ಬಿಎಂಟಿಸಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್ ಸೀಜ್, ದಂಡ ವಸೂಲಿ
ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ(CM Siddaramaiah) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು BMRCL ಮುಂದು: ಅಸಭ್ಯ ವರ್ತನೆ ಮಾಡಿದವರಿಗೆ 10,000 ರೂ. ದಂಡ!
ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಮಂಡಳಿಯು, ದಂಡದ ಮೊತ್ತವನ್ನು ಬರೋಬ್ಬರಿ ಶೇ.20 ಪಟ್ಟು ಹೆಚ್ಚಿಸಿದೆ.

ಬೆಂಗಳೂರು: 300 ಮರಗಳನ್ನು ಕಡಿದ ರಿಯಾಲ್ಟಿ ಸಂಸ್ಥೆಗೆ 40 ಲಕ್ಷ ರೂ. ದಂಡ, ಮೂವರ ಬಂಧನ
ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲು ಅಕ್ರಮವಾಗಿ 303 ಮರಗಳನ್ನು ಕಡಿದ ಆರೋಪದ ಮೇಲೆ ಮೂವರನ್ನು ಬಂಧಿಸಿ 40 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ಕೋಶವು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಬಿಲ್ಡರ್ ಗಳಿಗೆ ಬಲವಾದ ಸಂದೇಶ ರವಾನಿಸಿದೆ.

ರಾಮಮೂರ್ತಿಗೆ ಕೃಷ್ಣಶಿಲೆ ಕೊಟ್ಟಾತನಿಗೆ 80 ಸಾವಿರ ರೂ. ದಂಡ: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಆಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ‘ಬಾಲರಾಮ’ನ ಮೂರ್ತಿ ಕೆತ್ತಲು ಬಳಸಿದ ಕೃಷ್ಣಶಿಲೆಯನ್ನು ಒದಗಿಸಿದ ಕಲ್ಲು ಗಣಿಗಾರಿಕೆ ಗುತ್ತಿಗೆದಾರನಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಂಡ ವಿಧಿಸಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

ಕೆಎಸ್ ಆರ್ ಟಿಸಿ: ಟಿಕೆಟ್ ರಹಿತ ಪ್ರಯಾಣಿಕರಿಂದ ರೂ. 5.39 ಲಕ್ಷ ದಂಡ ವಸೂಲಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕರ್ನಾಟಕ ಮತ್ತು ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಅನುಚಿತ ವರ್ತನೆ: ಇನ್ಸ್ಟಾಗ್ರಾಮ್ ಸ್ಟಾರ್'ಗೆ ದಂಡ ವಿಧಿಸಿದ ಬಿಎಂಆರ್ಸಿಎಲ್!
ರೈಲುಗಳ ಒಳಗೆ ಮತ್ತು ಹೊರಗೆ ಹೋಗುವ ವೇಳೆ ಅನುಚಿತವಾಗಿ ವರ್ತಿಸಿ ಜನರು ಭೀತಿಗೊಳಗಾಗುವ ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಇನ್ಸ್ಟಾಗ್ರಾಮ್ ಸ್ಟಾರ್'ವೊಬ್ಬನಿಗೆ ನಮ್ಮ ಮೆಟ್ರೋ ಶಿಕ್ಷೆಯ ರುಚಿ ತೋರಿಸಿದೆ.

