firing

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿಗೆ ಗಾಯ
ಜನಾಂಗೀಯ ಸಂಘರ್ಷದಿಂದ ಬೂದಿಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಯೋಧರು ಸೇರಿ ಐವರಿಗೆ ಗಾಯ
ಜಮ್ಮುವಿನ ಅರ್ನಿಯಾ ಮತ್ತು ಆರ್ಎಸ್ ಪುರ ಸೆಕ್ಟರ್ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್ಎಫ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಇಬ್ಬರು ಯೋಧರು, ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ: ಎಎಸ್ ಐ ಸೇರಿ ಮೂವರು ಪ್ರಯಾಣಿಕರು ದುರ್ಮರಣ
ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ.

ಮಣಿಪುರ: ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಯೋಧನಿಗೆ ಗಾಯ; ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಭಾನುವಾರ ರಾತ್ರಿ 11.45ರ ಸುಮಾರಿಗೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿನಿಂದ ಸೇನಾ ಯೋಧನ ಎಡಗಾಲಿಗೆ ಗಾಯವಾಗಿದೆ.

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!
ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ: 16 ಮಂದಿ ಸಾವು
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ಶುಕ್ರವಾರ ಬೆಳಗ್ಗೆ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವು, ನಿನ್ನೆಯ ಗುಂಡಿನ ದಾಳಿಗೆ ಸಂಬಂಧಿಸಿದ್ದಲ್ಲ ಎಂದ ಸೇನಾಪಡೆ
ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವುನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಯೋಧನೊಬ್ಬ ಗುಂಡೇಟಿನ ಗಾಯದಿಂದ ಸಾವನ್ನಪ್ಪಿದ್ದಾನೆ ಎಂದು ಸೇನೆ ತಿಳಿಸಿದೆ.

ಪಂಜಾಬ್ ನ ಬಟಿಂಡಾ ಸೇನಾ ನೆಲೆ ಮೇಲೆ ಗುಂಡಿನ ದಾಳಿ: ನಾಲ್ವರ ಸಾವು; ಭಯೋತ್ಪಾದಕ ದಾಳಿಯಲ್ಲ ಎಂದ ಪೊಲೀಸರು
ಪಂಜಾಬ್ ನ ಬಟಿಂಡಾ ಮಿಲಿಟರಿ ಸ್ಟೇಶನ್ ನಲ್ಲಿ ಬುಧವಾರ ಮುಂಜಾನೆ ನಡೆದ ಗುಂಡಿನ ದಾಳಿಯ ಪ್ರಕರಣದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

