ರಾಜ್ಯಸರ್ಕಾರಕ್ಕೆ 1 ವರ್ಷ: ಮಧ್ಯವರ್ತಿಗಳ ಹಾವಳಿಯಿಲ್ಲದೆ ಫಲಾನುಭವಿಗಳಿಗೆ ಐದು ಗ್ಯಾರಂಟಿ ತಲುಪಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಕಳೆದ ವರ್ಷ 2023ರ ವಿಧಾನಸಭೆ ಚುನಾವಣೆ ಪೂರ್ವ ಐದು ಪ್ರಮುಖ ಗ್ಯಾರಂಟಿಗಳ ಭರವಸೆಗಳನ್ನು ರಾಜ್ಯದ ಜನತೆಗೆ ನೀಡಿದ್ದೆವು. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಫಲಾನುಭವಿಗಳಿಗೆ ಐದು ಗ್ಯಾರಂಟಿಗಳನ್ನು ತಲುಪಿಸಿದ್ದೇವೆ. ಐದು ಗ್ಯಾರಂಟಿಗಳನ್ನು ನೀಡಲು 36 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.