ರಾಜ್ಯಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಖಾತೆಗೆ 'ಗೃಹ ಲಕ್ಷ್ಮಿ' ಹಣ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು.