ರಾಜ್ಯಬೆಂಗಳೂರು: ಬನಶಂಕರಿ ದೇವಸ್ಥಾನದಲ್ಲಿ ಹೊಸ ಪ್ರಯೋಗ; ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರು!
ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಹೂವುಗಳು ಮತ್ತು ಅಡುಗೆ ಮನೆ ತ್ಯಾಜ್ಯದಿಂದ ತಯಾರಿಸಿದ ಸಾವಯವ ಗೊಬ್ಬರ ಇದೀಗ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಕಳೆದ ಮೂರು ತಿಂಗಳಿಂದ ದೇವಸ್ಥಾನದಲ್ಲಿ 368 ಕೆಜಿ ಗೊಬ್ಬರವನ್ನು ಮಾರಾಟಮಾಡಲಾಗಿದ್ದು, ಸಾರ್ವಜನಿಕರ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ.