flyover

ಬೆಂಗಳೂರಿನ 4 ಫ್ಲೈಓವರ್‌ಗಳಲ್ಲಿ ಬೈಕ್-ಆಟೋ ಸಂಚಾರ ಬಂದ್: ಟ್ರಾಫಿಕ್ ಜಾಮ್'ಗೆ ಸವಾರರು ಹೈರಾಣ; ಪೊಲೀಸರ ವಿರುದ್ಧ ಜನಾಕ್ರೋಶ..!
ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್, ಪೀಣ್ಯ ಮೇಲ್ಸೇತುವೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆ (ಸಂಜೀವನಗರ ಕ್ರಾಸ್‌ನಿಂದ ವಿದ್ಯಾವಿಹಾರ ಜಂಕ್ಷನ್‌ವರೆಗೆ) ಹಾಗೂ ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗಿನ ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ನಿರ್ಬಂಧ ಜಾರಿಗೆ ಬಂದಿದೆ.

ಇಬ್ಬಲೂರು ಜಂಕ್ಷನ್ ಬಳಿ ಫ್ಲೈಓವರ್: ನೀಲನಕ್ಷೆ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ GBA ಸೂಚನೆ
ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ವೇತುವೆ ನಿರ್ಮಾಣ ಮಾಡಿದರೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನೂತನ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ಅವಧಿಯಲ್ಲಿ ಮೇಲೇತುವೆ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸುವಂತೆ ಸೂಚಿಸಿದರು.

ಹೆಬ್ಬಾಳ ರಸ್ತೆ ಸಂಚಾರ ದಟ್ಟಣೆ ಕಡಿಮೆ ಮಾಡಲು GBA ಮುಂದು: ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಚಿಂತನೆ..!
ಎಸ್ಟೀಮ್ ಮಾಲ್ ಜಂಕ್ಷನ್, ಬಳ್ಳಾರಿ ರಸ್ತೆ ಮತ್ತು ಮಾನ್ಯತಾ ಟೆಕ್ ಪಾರ್ಕ್ ಅನ್ನು ಸಂಪರ್ಕಿಸುವ 1.4 ಕಿ.ಮೀ. ಫ್ಲೈಓವರ್ ಅನ್ನು ನಿರ್ಮಿಸಲು ಮುಂದಾಗಿದೆ. ಈ ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೆತ್ತಿಕೊಳ್ಳಲಿದೆ.

ಬೆಂಗಳೂರಿನಲ್ಲಿ Hit And Run: ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು
ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ದಂಪತಿ ಹೋಗುತ್ತಿದ್ದರು. ಈ ವೇಳೆ ಒನ್ ವೇಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಪ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಮತ್ತೆ ಗ್ರಹಣ: BBMP ಅಸಹಕಾರದಿಂದ ಕಾಮಗಾರಿ ಸ್ಥಗಿತ; ಗುತ್ತಿಗೆದಾರ ಆರೋಪ
ಮೇ ತಿಂಗಳ ಬಾಕಿ ಬಿಲ್‌ಗಳ ಜೊತೆಗೆ ಇದುವರೆಗೆ ಕೈಗೊಂಡ ಕಾಮಗಾರಿಗೆ ಸಂಸ್ಥೆಯು 11.5 ಕೋಟಿ ರೂ. ಬಿಲ್ ಮಾಡಿದೆ. ಒಟ್ಟಾರೆಯಾಗಿ 18 ಕೋಟಿ ರೂ. ಬಾಕಿ ಉಳಿದಿದ್ದು, ಬಿಲ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಸಹಕರಿಸದ ಕಾರಣ ಕಾಮಗಾರಿಗೆ ತೊಂದರೆಯಾಗುತ್ತಿದೆ.

ವ್ಹೀಲಿಂಗ್ ಹುಚ್ಚಾಟ: ಮೇಲ್ಸೇತುವೆಯಿಂದ ಸ್ಕೂಟರ್ ಎಸೆದವರ ವಿರುದ್ಧ ಪ್ರಕರಣ ದಾಖಲು..!
ಆಗಸ್ಟ್ 15ರಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.

ಚೆನ್ನೈ-ಬೆಂಗಳೂರು ಕಾರಿಡಾರ್ನಲ್ಲಿ ಮೇಲ್ಸೇತುವೆ ನಿರ್ಮಾಣ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ಮಾರ್ಗದಲ್ಲಿನ ಹೊಸಕೋಟೆ ತಾಲ್ಲೂಕಿನ ಕೊಳತೂರು ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಬೈಯಪ್ಪನಹಳ್ಳಿ, ಐಒಸಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು
ಬೆಂಗಳೂರಿನ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ಮತ್ತು ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ ದ್ವಿಪಥದ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

ಅಪೂರ್ಣ ಮೇಲ್ಸೇತುವೆ ಶೀಘ್ರವೇ ಪೂರ್ಣಾ: ಪ್ರಜ್ವಲ್ ರೇವಣ್ಣ
ನಗರದಲ್ಲಿ ನರಸಿಂಹ ರಾಜ ವೃತ್ತ ಹಾಗೂ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ಅಗತ್ಯವಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

