Food Poison

ಬೀದರ್: ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ 20 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಈ ಘಟನೆ ಔರಾದ್ ತಾಲ್ಲೂಕಿನ ಜಮಾಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನ ಮಧ್ಯೆ ಸಿಎಂ ಆರೋಗ್ಯದಲ್ಲಿ ಏರುಪೇರು: ಈಗ ಸಿದ್ದರಾಮಯ್ಯ ಹೇಗಿದ್ದಾರೆ?
ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ನಿನ್ನೆ ಕಾಂಗ್ರೆಸ್ ಏರ್ಪಡಿಸಿದ್ದ ಕೇಂದ್ರಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಹಳಸಿದ ಕೇಕ್ ತಿಂದು 5 ವರ್ಷದ ಮಗು ಸಾವು: ಪೋಷಕರಿಗೆ ICU ನಲ್ಲಿ ಚಿಕಿತ್ಸೆ
ಮೂವರಿಗೂ ಹಳಸಿದ ಕೇಕ್ ತಿಂದ ಕೂಡಲೇ ವಾಂತಿ ಹಾಗೂ ಅತಿಸಾರದ ಲಕ್ಷಣಗಳು ಕಂಡು ಬಂದಿದೆ. ಕೇಕ್ ಜೊತೆಗೆ ಅನ್ನ ಹಾಗೂ ಹಪ್ಪಳವನ್ನು ಸೇವನೆ ಮಾಡಿರುವುದಾಗಿ ಬಾಲಕನ ತಂದೆ ಹೇಳಿಕೊಂಡಿದ್ದಾರೆ.

ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ
ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ಮೈಸೂರು: ಗೃಹಪ್ರವೇಶ ಸಮಾರಂಭದಲ್ಲಿ ಆಹಾರ ಸೇವಿಸಿ ಮಹಿಳೆ ಸಾವು, 39 ಮಂದಿ ಅಸ್ವಸ್ಥ
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ ಗೃಹಪ್ರವೇಶ ಸಮಾರಂಭದಲ್ಲಿ ಆಹಾರ ಸೇವಿಸಿದ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, 39 ಗ್ರಾಮಸ್ಥರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಂಜಾಬ್: ಹುಟ್ಟುಹಬ್ಬದಂದು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದ 10 ವರ್ಷದ ಬಾಲಕಿ ಸಾವು
ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ತಿಂದ ನಂತರ ಶಂಕಿತ ವಿಷಾಹಾರದಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ. ಬಾಲಕಿ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿತು. ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಲಾಗಿದೆ ಎಂದು ಬಾಲಕಿಯ ತಾತ ತಿಳಿಸಿದ್ದಾರೆ.

ಮಹಾಶಿವರಾತ್ರಿ ಉಪವಾಸದ ವೇಳೆ ವಿಷಾಹಾರ ಸೇವನೆ; ನಾಗ್ಪುರದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ 'ಮಹಾಶಿವರಾತ್ರಿ' ಸಂದರ್ಭದಲ್ಲಿ ಉಪವಾಸ ಆಚರಿಸುವಾಗ ತಿಂಡಿಗಳು ಮತ್ತು ಇತರ ತಿನಿಸುಗಳನ್ನು ಸೇವಿಸಿದ ನಂತರ 50 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಕನಿಷ್ಠ 100 ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆ
ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕೊಪ್ಪಳ: ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಜಿಲ್ಲೆಯ ಅಳವಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ (RMSA school )ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.

