ದೇಶದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ
ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.