ದೇಶಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಫೂಲ್ಪ್ರೂಫ್ ಭದ್ರತೆ ಒದಗಿಸಲು ಬದ್ಧ: ಮಧ್ಯ ಪ್ರದೇಶದ ಸಚಿವ
ಭಾರತ್ ಜೋಡೋ ಯಾತ್ರೆಯ ವೇಳೆ ಇಂದೋರ್ನಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಬೆದರಿಕೆಯೊಡ್ಡಿರುವ ಅನಾಮಧೇಯ ಪತ್ರದ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, ಈ ಪಾದಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಶನಿವಾರ ಹೇಳಿದ್ದಾರೆ.