Found Dead

ಗೆಳೆಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಕಲಬುರಗಿಯ ಕಾಲೇಜು ವಿದ್ಯಾರ್ಥಿ ಭೀಮಾ ನದಿಯಲ್ಲಿ ಶವವಾಗಿ ಪತ್ತೆ!
ಕಲಬುರಗಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆತನನ್ನು ಆತನ ಸ್ನೇಹಿತರೇ ಸೇತುವೆಯಿಂದ ತಳ್ಳಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ಶಂಕಿಸಿದ್ದಾರೆ.

ಬೆಂಗಳೂರು: ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ದಾವಣಗೆರೆ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ
20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶನಿವಾರ ಇಲ್ಲಿನ ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಶವವಾಗಿ ಪತ್ತೆ!
ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ನಟನ ಶವ ಅಂಧೇರಿಯ ಅವರ ಮನೆಯ ಸ್ನಾನಗೃಹದಲ್ಲಿ ಪತ್ತೆಯಾಗಿದೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಬೆಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ; ಪ್ರಿಯತಮೆಯ ಚಿಕ್ಕಪ್ಪ ಸೇರಿ ನಾಲ್ವರ ಬಂಧನ
ತಾನು ಮದುವೆ ಮಾಡಿಕೊಳ್ಳಬೇಕಿದ್ದ ಅತ್ತೆ ಮಗಳ ಜತೆ ಮೊಬೈಲ್‌ನಲ್ಲಿ ಚಾಟಿಂಗ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಸ್ನೇಹಿತನನ್ನು ಅಪಹರಿಸಿ ಹತ್ಯೆ ಮಾಡಿದ್ದ ಮೃತನ ಗೆಳತಿಯ ಸೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿ
ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರಿ ಅಫೀಫಾ ಎಂದು ಗುರುತಿಸಲಾಗಿದೆ.

ಅಮೆರಿಕ: ಪಾಪ್ ತಾರೆ ಆರನ್ ಕಾರ್ಟರ್ ಶವವಾಗಿ ಪತ್ತೆ
ಅಮೆರಿಕದ ಪಾಪ್ ತಾರೆ ಆರನ್ ಕಾರ್ಟರ್ ಶನಿವಾರ ಲಾಸ್ ಏಂಜಲೀಸ್ ಬಳಿಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಲೆಯಾಳಂ ನಟ ‘ಶರತ್ ಚಂದ್ರನ್’ ಶವವಾಗಿ ಪತ್ತೆ: 37 ನೇ ವರ್ಷಕ್ಕೆ ಬದುಕು ಮುಗಿಸಿದ ಯುವ ಕಲಾವಿದ!
ಮಲಯಾಳಂ ನಟ ಶರತ್ ಚಂದ್ರನ್ ಶವವಾಗಿ ಪತ್ತೆಯಾಗಿದ್ದು, ಅವರಿಗೆ 37 ವರ್ಷ ವಯಸ್ಸಾಗಿತ್ತು, ಆದರೆ ನಟನ ಸಾವಿಗೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ.

ಕ್ಯಾಲಿಫೋರ್ನಿಯಾ: ಕಿಡ್ನಾಪ್ ಆಗಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿ ಶವವಾಗಿ ಪತ್ತೆ!
ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಒಡಿಶಾ: ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ತನಿಖೆ ಮುಂದುವರಿಕೆ
ಒಡಿಶಾದ ಕಟಕ್‌ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

