free Bus Pass

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಗೆ ಚಾಲನೆ: ಪಾಸ್ ಪಡೆಯಲು ಇರುವ ನಿಯಮಗಳೇನು?
ಈ ಸಂಬಂಧ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ!
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ನಿರ್ಧರಿಸಲಾಯಿತು.

ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ (ಸಂದರ್ಶನ)
ಮಹಿಳೆಯರಿಗೆ ಎಲ್ಲಾ ಸರ್ಕಾರಿ, ನಾನ್ ಎಸಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆ ಕಾಂಗ್ರೆಸ್ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನೂ ನೀಡಿತ್ತು.

ಬಿಎಂಟಿಸಿ 'ಉಚಿತ ಬಸ್ ಪಾಸ್' ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರು
ಶ್ರಮಿಕ ವರ್ಗದ ಸುರಕ್ಷಿತ ಓಡಾಟಕ್ಕೆ ಘೋಷಿಸಿದ್ದ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31ಕ್ಕೇ ಅಂತ್ಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂರಾರು ಪ್ಲಂಬರ್ ಗಳು, ಬಡಗಿಗಳು, ಕಟ್ಟಣ ನಿರ್ಮಾಣ ಕಾರ್ಮಿಕರು ಹೊಸ ಸರ್ಕಾರ ಗ್ಯಾರಂಟಿಗಳ ಜಾರಿಗಾಗಿ ಕಾದು ಕುಳಿತಿದ್ದಾರೆ.

ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಯೋಜನೆ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಉಚಿತ ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ರಾಜ್ಯದ 30 ಲಕ್ಷ ದುಡಿಯುವ ಮಹಿಳೆಯರು ಭಾರೀ ನಿರಾಸೆಗೊಳಗಾಗಿದ್ದಾರೆ.

Karnataka Budget 2023: ಎರಡು ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ
ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.8 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 543 ಕೋಟಿ ರೂ. ಸಹಾಯಧನ ನೀಡಲಾಗುವುದು. 2 ಲಕ್ಷ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

'ಪತ್ರಿಕೆ-ಮಾಧ್ಯಮ ಲಾಭದಾಯಕ ದಂಧೆಯಾಗಿದೆ'- ಕಾರಜೋಳ; 'ಅವರಿಗೆ ಮಾನ, ಮರ್ಯಾದೆ ಇಲ್ಲ' ಎಂದ ಬಸನಗೌಡ ಪಾಟೀಲ್ ಯತ್ನಾಳ್
ಪತ್ರಿಕೋದ್ಯಮ ಲಾಭ, ನಷ್ಟದ ಲೆಕ್ಕಾಚಾರ ಮಾಡುವಂತಾಗಿದ್ದು, ಸಾಮಾಜಿಕ ಕಳಕಳಿ ಮರೆಯಾಗಿದೆ. ಮಾಧ್ಯಮ ಮಿತ್ರರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ: ಸಿಎಂ ಬೊಮ್ಮಾಯಿ
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲು ಬಜೆಟ್ನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭರವಸೆ ನೀಡಿದ್ದಾರೆ.

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.

